News Karnataka Kannada
Friday, May 03 2024
ಮೈಸೂರು

ಮೈಸೂರು: ಹೋಟೆಲ್‍ ನಲ್ಲಿ ಯುವತಿ ಸಾವು

Minor girl found dead at govt-run hostel in K’taka
Photo Credit : Pixabay

ಮೈಸೂರು: ಪ್ರಿಯಕರನೊಂದಿಗೆ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಜತೆಗಿದ್ದ ಪ್ರಿಯಕರ ನಾಪತ್ತೆಯಾಗಿರುವ ಘಟನೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.

ಸಾವನ್ನಪ್ಪಿದ ಯುವತಿ ಮೈಸೂರಿನ ಪಿರಿಯಾಪಟ್ಟಣದ ಅಪೂರ್ವ ಶೆಟ್ಟಿ ಎಂದು ಹೇಳಲಾಗಿದ್ದು, ಈಕೆ ಕಳೆದ ಎರಡು ದಿನಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ನಗರದ ವಿನೋಬಾ ರಸ್ತೆಯ ಕೋರಂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಳು.

ಆದರೆ ಯುವತಿ ಹೋಟೆಲ್ ನ ಕೊಠಡಿಯಿಂದ ಹೊರಗೆ ಬಾರದೆ ಇದ್ದಾಗ ಅನುಮಾನ ಬಂದ ಹೋಟೆಲ್ ಸಿಬ್ಬಂದಿ ಪೋಲಿಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ನಗ್ನ ಸ‍್ಥಿತಿಯಲ್ಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ದೇವರಾಜ ಠಾಣೆ ಪೋಲಿಸರು ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿದ್ದು, ಯುವಕ ಯಾರು? ಆತ ಎಲ್ಲಿಯವನು? ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಯುವಕ ಆಕೆಯನ್ನು ಕೊಲೆ ಮಾಡಿದ್ದಾನೊ ಅಥವಾ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೊ ಎಂಬ ಬಗ್ಗೆ ಪೊಲೀಸರ ತನಿಖೆಯಿಂದಷ್ಟೆ ಗೊತ್ತಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು