News Karnataka Kannada
Saturday, May 04 2024
ಮೈಸೂರು

ಮೈಸೂರು: ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನ ದರೋಡೆ, ಪ್ರಮುಖ ಆರೋಪಿ ಬಂಧನ

Mysuru: Auto driver robbed on pretext of asking for drop, main accused arrested
Photo Credit : News Kannada

ಮೈಸೂರು: ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಪೈಕಿ ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು ಮತ್ತೋರ್ವನ ಬಂಧನೆಕ್ಕೆ ಬಲೆ ಬೀಸಿರುವುದಾಗಿ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಇದೇ ತಿಂಗಳು ೧೮ ರಂದು ನಡೆದಿದ್ದ ಪ್ರಕರಣದಲ್ಲಿ ಆಟೋ ಡ್ರೈವರ್ ಅನ್ನು ಚಾಕು ಹಿಡಿದು  ಹೆದರಿಸಿ ೨ ಸಾವಿರ ನಗದು ಒಂದು ಮೊಬೈಲ್ ಪೋನ್ ಹಾಗೂ ಆಟೋದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ  ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು ಆರೋಪಿ ಇದೇ ರೀತಿ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಅನೇಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೊಪಿಗಾಗಿ ಬಲೆ ಬೀಸಿರುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು