Categories: ಮೈಸೂರು

ಮೈಸೂರು: ಪಾರಂಪರಿಕ ಉಡುಗೆಯಲ್ಲಿ ಮಿಂಚಿದ ಜೋಡಿಗಳು

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನಗರದ ಪುರಭವನದ (ಟೌನ್ ಹಾಲ್) ಆವರಣದಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ ಟಾಂಗಾ ಸವಾರಿ’ಗೆ ಪಾರಂಪರಿಕ ದಸರಾ ಉಪಸಮಿತಿ ಅಧ್ಯಕ್ಷ ಗೋಪಾಲರಾವ್ ಚಾಲನೆ ನೀಡಿದರು.

ಮೈಸೂರು ಭಾಗದ ವಿವಿಧ ಭೌಗೋಳಿಕ ಪ್ರದೇಶಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೊಡವ ದಿರಿಸು, ಮಹಾರಾಜರ ತೊಡುಗೆ, ಮೈಸೂರು ಪೇಟ ಪಂಚೆ ಹಾಗೂ ಮೈಸೂರು ರೇಷ್ಮೆ ಸೀರೆ ಸೇರಿದಂತೆ ವಿವಿಧ ರೀತಿಯ ಪಾರಂಪರಿಕ ಉಡುಗೆ ತೊಟ್ಟು ಭಾಗವಹಿಸಿದ್ದ ಜೋಡಿಗಳಿಗೆ ಬಾಗಿನ ನೀಡಿ ಸ್ವಾಗತಿಸಲಾಯಿತು. ಪಾರಂಪರಿಕ ಟಾಂಗಾ ಸವಾರಿಯಲ್ಲಿ ಒಟ್ಟು 42 ಜೋಡಿಗಳು ಭಾಗವಹಿಸಿ ದಸರೆ ಸಂದರ್ಭದಲ್ಲಿ ತಮ್ಮ ಈ ದಿನವನ್ನು ಅವಿಸ್ಮರಣೀಯವಾಗಿಸಿಕೊಂಡರು.

ಪಾರಂಪರಿಕ ಟಾಂಗಾ ಸವಾರಿಯು ಪುರಭವನದಿಂದ ಪ್ರಾರಂಭವಾಗಿ ಹತ್ತನೆ ಚಾಮರಾಜ ಒಡೆಯರ್ ವೃತ್ತ, ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಕಟ್ಟಡ, ಜಗನ್ ಮೋಹನ ಅರಮನೆ, ಪರಕಾಲ ಮಠ, ವಾಣಿಜ್ಯ ತೆರಿಗೆ ಕಛೇರಿ, ಪದ್ಮಾಲಯ, ಮುಡಾ ವೃತ್ತ, ಪ್ರಾಚ್ಯವಿದ್ಯಾಸೌಧ, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿಗಳ ಕಛೇರಿ, ಮಹಾರಾಜ ಜೂನಿಯರ್ ಕಾಲೇಜು, ಮೆಟ್ರೊಪೋಲ್ ವೃತ್ತ, ರೈಲ್ವೆ ನಿಲ್ದಾಣ, ಮೈಸೂರು ಮೆಡಿಕಲ್ ಕಾಲೇಜು ಮೂಲಕ ಹಾದು ಹೋಗಿ ದೊಡ್ಡ ಗಡಿಯಾರದ(ಟೌನ್ ಹಾಲ್) ಹತ್ತಿರ ಮುಕ್ತಾಯವಾಯಿತು.

ಇತಿಹಾಸ ಮತ್ತು ಪುರಾತತ್ವ ತಜ್ಞ ಡಾ.ಶೆಲ್ವಪಿಳ್ಳೆ ಅಯ್ಯಂಗಾರ್ ಪಾರಂಪರಿಕ ಉಡುಗೆಯಲ್ಲಿ ಟಾಂಗಾ ಸವಾರಿಯಲ್ಲಿದ್ದ ದಂಪತಿಗಳಿಗೆ ಪಾರಂಪರಿಕ ಕಟ್ಟಡಗಳು ಕುರಿತು ಮಾಹಿತಿಯನ್ನು ನೀಡಿ ಮೈಸೂರು ಪಾರಂಪರಿಕ ಕಟ್ಟಗಳ ಐತಿಹಾಸಿಕ ಹಿನ್ನೆಯನ್ನು ತಿಳಿಸಿಕೊಟ್ಟರು.

ಬೆಂಗಳೂರಿನ ಹೇಮಲತಾ ಪ್ರಭು ಜೋಡಿ ಮಾತನಾಡಿ, ದಸರಾ ಕಾರ್ಯಮಕ್ಕಾಗಿಯೇ ಮೈಸೂರಿಗೆ ಬಂದಿದ್ದೇವೆ. ಪಾರಂಪರಿಕ ಟಾಂಗಾ ಸವಾರಿಯಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷ ಉಂಟುಮಾಡಿದೆ. ಈ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಜಂಬೂ ಸವಾರಿಯನ್ನು ವೀಕ್ಷಿಸಲು ಕಾತುರರಾಗಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎನ್.ಎಸ್.ರಂಗರಾಜು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳ ಹಾಗೂ ಸಿಬ್ಬಂದಿ ಇದ್ದರು.

Gayathri SG

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

16 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

35 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago