News Karnataka Kannada
Friday, May 17 2024
ಮೈಸೂರು

ಮೈಸೂರು ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ

Mysuru Cultural Sub-Committee Poster Released
Photo Credit : By Author

ಮೈಸೂರು: ಬರಗಾಲದ ಹಿನ್ನಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವೆಚ್ಚದಲ್ಲಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಅರಮನೆ ಮಂಡಳಿ ಕಚೇರಿಯಲ್ಲಿ ಈ ಬಾರಿಯ ದಸರಾ ಮಹೋತ್ಸವ, ಯುವ ಸಂಭ್ರಮ, ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಾರಿ ವೈಭವದಿಂದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಪ್ರಕೃತಿ ನಮ್ಮ ಪರವಾಗಿರದೆ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಸರಳವೂ ಅಲ್ಲದ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.

ಈ ಬಾರಿ ದಸರಾ ವೇಳೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ಕಡಿಮೆ ವೆಚ್ಚದಲ್ಲಿ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಜತೆಗೆ ಕೆಲ ಕಾರ್ಯಕ್ರಮಗಳನ್ನು ಪ್ರಾಯೋಜಕತ್ವದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

18 ಉಪ ಸಮಿತಿ ರಚನೆ: ಈ ಬಾರಿಯ ದಸರಾ ಮಹೋತ್ಸವಕ್ಕೆ 18 ಉಪಸಮಿತಿ ರಚಿಸಲಾಗಿದೆ. ದಸರಾ ವೆಬ್‌ಸೈಟ್, ಯುವ ಸಂಭ್ರಮ, ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯುವಜನತೆ, ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ನಿಟ್ಟಿನಲ್ಲಿ ಸ್ತಬ್ಧಚಿತ್ರ, ಕಾರ್ಯಕ್ರಮಗಳು ರೂಪುಗೊಳ್ಳಲಿವೆ. ಸದಬಿರುಚಿಯಡಿ ಯುವ ಜನರನ್ನು ಸಂಭ್ರಮಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸಂಬಂಧ 31 ಜಿಲ್ಲೆಗಳ ಕಲಾವಿದರು, ಅಧಿಕಾರಿಗಳ ಸಭೆ ನಡೆಸಿದ್ದು, ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸುವಂತೆ ಸೂಚಿಸಿದ್ದೇನೆ. ಪ್ರತಿ ವರ್ಷದಂತೆ ಈ ಬಾರಿಯೂ ರೈತ ದಸರಾ, ಯುವ ದಸರಾ ಇರಲಿದೆ. ಹೊರಗಿನ ಕಲಾವಿದರೂ ಯುವ ದಸರಾದಲ್ಲಿ ಭಾಗವಹಿಸಲಿದ್ದು, ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಅವರು, ಆಹಾರ ಮೇಳವನ್ನು ಒಂದು ಕಡೆ ಮಾತ್ರ ಆಯೋಜಿಸಲಾಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿ ಮಂಜುಳಾ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ನಗರ ಪೊಲೀಸ್ ಆಯುಕ್ತ ರಮೇಶ್.ಬಿ, ಎಸ್‌ಪಿ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು