News Karnataka Kannada
Sunday, April 28 2024
ಮೈಸೂರು

ಮೈಸೂರು ದಸರಾ ಮಹೋತ್ಸವ: ಪಾರಂಪರಿಕ ಸೈಕಲ್ (ಟ್ರಿನ್-ಟ್ರಿನ್) ಸವಾರಿ

Mysor
Photo Credit : By Author

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ” (ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು  ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಟೌನ್‌ಹಾಲ್‌ನಿಂದ ಹತ್ತನೇ ಚಾಮರಾಜ ಒಡೆಯರ್ ವೃತ್ತ, ನಾಲ್ಕನೇ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ಡೌನ್ ಕಟ್ಟಡ, ಜಗನ್ ಮೋಹನ ಅರಮನೆ, ಪರಕಾಲ ಮಠ, ವಾಣಿಜ್ಯ ತೆರಿಗೆ ಕಚೇರಿ, ಪದ್ಮಾಲಯ,  ಮುಡಾ ವೃತ್ತ, ಪ್ರಾಚ್ಯವಿದ್ಯಾಸೌಧ, ಕ್ರಾಫರ್ಡ್ಹಾಲ್, ಜಿಲ್ಲಾಧಿಕಾರಿ ಕಚೇರಿ, ಮಹರಾಜ ಜೂನಿಯರ್ ಕಾಲೇಜು, ಮೆಟ್ರೊಫೋಲ್ ವೃತ್ತ, ರೈಲ್ವೆ ನಿಲ್ದಾಣ, ಮೈಸೂರು ಮೆಡಿಕಲ್ ಕಾಲೇಜು, ಹಾಗೂ ಸರ್ಕಾರಿ ಆಯುರ್ವೇದ ಕಾಲೇಜು ಮೂಲಕ ಸಾಗಿ ದೊಡ್ಡ ಗಡಿಯಾರದ ಹತ್ತಿರ ಮುಕ್ತಾಯಗೊಂಡಿತು.

ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ 15 ವರ್ಷ ಮೇಲ್ಪಟ್ಟ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ  ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ  ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು