ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಭಕ್ತರು ಹರಿದು ಬರುತ್ತಾರೆ. ಆದರೆ ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಈ ಬಾರಿ ಭಕ್ತರಿಗೆ ದರ್ಶನ ಸಮಯದಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
ಈ ಬಾರಿ ಹಬ್ಬದ ಜೊತೆಗೆ ಗ್ರಹಣವೂ ಬಂದಿದೆ. ಹಾಗಾಗಿ ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 25ರಂದು ವಿಶೇಷ ಪೂಜೆ ನಡೆಯಲಿದೆ. ಗ್ರಹಣದ ಪೂಜೆ ನಂತರ ಮಧ್ಯಾಹ್ನ 1 ಗಂಟೆ ಬಳಿಕ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿಗೊಳಿಸಿದೆ.
ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ
ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಅನೇಕ ಜಿಲ್ಲೆಗಳ ದೇವಾಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅದರಂತೆಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕೂಡ ಚಾಮುಂಡೇಶ್ವರಿ ತಾಯಿಯ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದೀಪಾವಳಿ ಹಬ್ಬ ಬಂತೆಂದರೆ ಸಾಕು ತಾಯಿ ಚಾಮುಂಡಿ ದರ್ಶನ ಪಡೆಯಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ದೀಪಾವಳಿ ಹಬ್ಬದ ದಿನದಂದೇ ಸೂರ್ಯಗ್ರಹಣ ಬಂದಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…