News Karnataka Kannada
Monday, April 29 2024
ಮೈಸೂರು

ಮೈಸೂರು: ಚುನಾವಣೆ ಹಿನ್ನಲೆ ಜಾತ್ರೆ, ಉತ್ಸವಗಳ ಮುಂದೂಡಿಕೆ

Ban on sale of liquor in the run-up to elections
Photo Credit : News Kannada

ಮೈಸೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಸಿ.ಆರ್.ಪಿ.ಸಿ 144 ರನ್ವಯ ಮೇ.10 ರಂದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ರೀತಿಯ ಸಂತೆ, ಜಾತ್ರೆ, ಉತ್ಸವ, ಇತ್ಯಾದಿಗಳನ್ನು ಮುಂದೂಡಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದ್ದು, ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಕೆ, ಬರ್ಚಿ, ಖಡ್ಗ, ಗದೆ, ಬಂದೂಕು, ಊರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತçಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.

ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕ್ವಾರ ಪಾದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ / ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು `ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗುವಂತಿಲ್ಲ.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು / ನಿಯಮಗಳನ್ನು ಪಾಲಿಸುವುದು.

ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಸ್ ಫೋನ್ ಅಥವಾ ಇನ್ನಿತರ ಎಲೆಕ್ಟಾçನಿಕ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ / ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ) ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ / ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು.

ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ.

ಪ್ರತಿಬಂಧಕಾಜ್ಞೆಯ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು