ಮೈಸೂರು

ಮೈಸೂರು: ಶ್ರೀ ಚಿಕ್ಕದೇವಮ್ಮನವರ ತಾಳು ಬೆಟ್ಟದ ಪಾದದ ಮೆಟ್ಟಿಲು ಉದ್ಘಾಟನೆ

ಮೈಸೂರು: ಸರಗೂರು ತಾಲ್ಲೂಕಿನ ಶ್ರೀ ಚಿಕ್ಕದೇವಮ್ಮನವರ ತಾಳು ಬೆಟ್ಟದ ಪಾದದ ಹತ್ತಿರದ ಮುಖ್ಯ ದ್ವಾರದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 4 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ಟಿಲು ಮತ್ತು ತಡೆಗೋಡೆಯನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರಲ್ಲದೆ, ಮೆಟ್ಟಿಲ ಮೂಲಕ ಜನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇನ್ನುಳಿದ ಮೆಟ್ಟಲುಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ವತಿಯಿಂದ 1 ಕೋಟಿ 75 ಲಕ್ಷ ಹಾಗೂ ದೇವಸ್ಥಾನಕ್ಕೆ ಹೋಗುವ ರಸ್ತೆಗೆ 1 ಕೋಟಿ ಮಂಜೂರಾಗಿದ್ದು, ಒಟ್ಟಾರೆ 2 ಕೋಟಿ 75 ಲಕ್ಷದ ಕಾಮಗಾರಿಗೆ ಇದೇ ವೇಳೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ ನೀಡಿದ್ದಾರೆ.

ಇದೇ ವೇಳೆ ಶಾಸಕ ಅನಿಲ್ ಚಿಕ್ಕಮಾದು ಅವರು ತಮ್ಮ 34 ನೇ ಹುಟ್ಟು ಹಬ್ಬವನ್ನು ತಾಲ್ಲೂಕಿನ ನಾಡದೇವತೆ ಚಿಕ್ಕದೇವಮ್ಮನ ಸನ್ನಿಧಾನಕ್ಕೆ ತೆರಳಿ ಧರ್ಮಪತ್ನಿ ಸೌಮ್ಯ, ತಾಯಿ ನಾಗಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ ಪಂ. ಸದಸ್ಯ ಹಾಗೂ ಶ್ರೀ ವಾಲ್ಮೀಕಿ ಮಹರ್ಷಿ ಸಹಕಾರ ಸಂಘದ ಅಧ್ಯಕ್ಷ ಕೆ ಚಿಕ್ಕವೀರನಾಯಕ ಮಾತನಾಡಿ, ಅನಿಲ್ ಚಿಕ್ಕಮಾದು ಅವರು ಉತ್ಸಾಹದಿಂದ ಕೆಲಸ ಮಾಡುವುದರ ಜೊತೆಗೆ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಇಂದಿನ ಯುವ ಕಾರ್ಯಕರ್ತರಿಗೆ ಅವರು ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗಳು ಅವರ ಅವಧಿಯಲ್ಲಿ ನಡೆಯುವಂತಾಗಲಿ ಎಂದರು.

ಮಾಜಿ ನಾಯಕ ಸಮಾಜದ ಅಧ್ಯಕ್ಷ ಶಂಭುಲಿಂಗ ನಾಯಕ ಮಾತನಾಡಿ, ರಾಜಕೀಯದಲ್ಲಿ ವಿರೋಧ ಪಕ್ಷ ದವರಿಗೂ ಗೌರವ ನೀಡುವ ವ್ಯಕ್ತಿತ್ವ ಅನಿಲ್ ಚಿಕ್ಕಮಾದು ಅವರದ್ದಾಗಿದೆ. ಶಾಸಕರಾಗಿ, ಹಲವಾರು ಕೆಲಸ ಕಾರ್ಯಗಳನ್ನು ಹೆಚ್ಚಿನ ರೀತಿಯಲ್ಲಿ ಮಾಡಿದ್ದಾರೆ, ಇವರಿಂದ ದೀನ ದಲಿತರು, ಬಡವರು, ಕೂಲಿಕಾರ್ಮಿಕರು ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದರು.

Sneha Gowda

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

5 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

23 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

44 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago