News Karnataka Kannada
Friday, May 10 2024
ಮೈಸೂರು

ಮೈಸೂರು: ಸೆ.3 ರಂದು ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಉದ್ಯೋಗ ಮೇಳ

Mysuru: Job Fair to be held on Sept.3
Photo Credit : By Author

ಮೈಸೂರು: ಕೈಗಾರಿಕಾ ತರಬೇತಿ ಮತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಗೂ ಸೇವಾ ಚಿಲುಮೆ ಚಾರಿಟಬಲ್ ಟ್ರಸ್ಟ್ (ರಿ) ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ 2022ರ ಸೆಪ್ಟೆಂಬರ್ 3 ರಂದು ಶನಿವಾರ ಬೆಳಿಗ್ಗೆ 9 ಘಂಟೆಗೆ, ಮೈಸೂರಿನ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನ, ಎನ್.ಆರ್.ಮೊಹಲ್ಲಾ ಆರ್ಚ ಸರ್ಕಲ್, ರಾಜೇಂದ್ರ ನಗರ (ಕೆಸರೆ) ಮೈಸೂರು ಇಲ್ಲಿ “ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 25 ರಿಂದ 30 ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಬಿ.ಇ, ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮೈಸೂರು-07 ಇವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ:0821-2489972, ರಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಹಾಗೂ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕನಿಷ್ಟ 10 ಬಯೋಡಟಾದೊಂದಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು