Categories: ಮೈಸೂರು

ಮೈಸೂರು: ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ನಿಂದ ಅನುಪಯುಕ್ತ ವಸ್ತು ಹಸ್ತಾಂತರ

 

ಮೈಸೂರು: ಹಳೆ ವಸ್ತುಗಳನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಆರಂಭಿಸಿರುವ ‘ನನ್ನ ಜೀವನ ನನ್ನ ಸ್ವಚ್ಛ ನಗರ’ ಎಂಬ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅನುಪಯುಕ್ತ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ಪಾಲಿಕೆಯು ಮೇ 20 ರಿಂದ ಜೂನ್ 5ರ ವರೆಗೆ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದ್ದು ಅದರಂತೆ ಹಳೆಯ ಬಟ್ಟೆ , ನ್ಯೂಸ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಅವರು ವಸ್ತುಗಳನ್ನು ಸ್ವೀಕರಿಸಿ ಮಾತನಾಡಿ, ನಗರದಾದ್ಯಂತ ಪಾಲಿಕೆ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ಇಲ್ಲವೇ ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ. ನಾಗರಿಕರು ಈ ಉಪಯುಕ್ತ ಯೋಜನೆಯನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ನಮ್ಮ ಒಡನಾಡಿಗಳೆಲ್ಲರೂ ನೀಡಿದ ಹಳೆಯ ಬಟ್ಟೆಗಳು ಹಾಗೂ ಪುಸ್ತಕಗಳನ್ನು ಮೈಸೂರಿನ ಉತ್ತರಾದಿ ಮಠದ ಪಕ್ಕದಲ್ಲಿರುವ ಅನುಪಯುಕ್ತ ವಸ್ತುಗಳ ಸಂಗ್ರಹ ಕೇಂದ್ರಕ್ಕೆ ನೀಡಿದ್ದೇವೆ. ಇದರಿಂದ ಸಾಕಷ್ಟು ಜನಕ್ಕೆ ಅನುಕೂಲವಾಗಲಿದೆ ಪುಸ್ತಕಗಳು ಅಗತ್ಯವಿರುವವರಿಗೆ ಬಳಕೆಯಾಗುತ್ತದೆ. ಹೀಗಾಗಿ ಪಾಲಿಕೆಯು ಜನರ ಸಂಕಷ್ಟಕ್ಕೆ ಸ್ಪಂದಿಸುವ ಪರಿಸರ ಸ್ನೇಹಿಯಾದ ವಿಶೇಷ ಅಭಿಯಾನಕ್ಕೆ ಕೈಜೋಡಿಸಿರುವುದು ನಮಗೆ ಅತ್ಯಂತ ತೃಪ್ತಿ ನೀಡಿದೆ ಎಂದರು.

ಈ ಅಭಿಯಾನದಿಂದ ನಗರದಲ್ಲಿ ಸಂಗ್ರಹವಾಗುವ ಕಸದ ಪ್ರಮಾಣ ಕಡಿಮೆಯಾಗುವುದಲ್ಲದೆ, ಒಂದು ಮನೆಯಲ್ಲಿ ಬಳಕೆಯಾಗದೆ ಮೂಲೆಯಲ್ಲಿ ಇರಿಸಿರುವ ವಸ್ತುಗಳು ಬೇರೊಬ್ಬರಿಗೆ ಬಳಕೆಗೆ ಬರುತ್ತವೆ. ಅಂತಹ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಿದರೆ ಅವುಗಳನ್ನು ಮರು ಬಳಕೆ ಮಾಡಬಹುದಾಗಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನೀಡಿದರೆ ಬಟ್ಟೆಯ ಬ್ಯಾಗ್ ವಿತಗರಿಸಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಮರು ಬಳಕೆಗೆ ನೀಡಲಾಗುತ್ತದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್ ಎನ್ ರಾಜೇಶ್, ಬೈರತಿ ಲಿಂಗರಾಜು, ಮಂಜುನಾಥ್, ರವಿಚಂದ್ರ, ಹಾಗೂ ಇನ್ನಿತರರು ಹಾಜರಿದ್ದರು.

Sushma K

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

28 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

43 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 hour ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

1 hour ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

2 hours ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago