Categories: ಮೈಸೂರು

ಮೈಸೂರು: ಮತದಾನಕ್ಕೆ 2 ದಿನ ಮುಂಚೆ ಜಿಲ್ಲೆಯನ್ನು ತೊರೆಯಿರಿ

ಮೈಸೂರು: ಜಿಲ್ಲೆಯವರು ಅಲ್ಲದ ರಾಜಕೀಯ ಪ್ರತಿನಿಧಿಗಳು ಮತದಾನದ ಎರಡು ದಿನ ಮುಂಚೆ ಜಿಲ್ಲೆಯನ್ನು ಬಿಟ್ಟು ತಮ್ಮ ಜಿಲ್ಲೆಗಳಿಗೆ ಹೋಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹೋಟೆಲ್ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹೊರಗಡೆಯಿಂದ ಬಂದು ಹಣ ಹಂಚುವುದು ಹಾಗೂ ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗುವ ಸಾಧತೆ ಇರುತ್ತದೆ. ಹೊರಗಿನವರಿಗೆ ರೂಂಗಳನ್ನು ನೀಡುವಾಗ ಅವರ ಗುರುತಿನ ಚೀಟಿ ಹಾಗೂ ಅವರು ಬಂದಿರುವ ಉದ್ದೇಶ ತಿಳಿದುಕೊಳ್ಳಬೇಕು. ರಾಜಕೀಯ ಉದ್ದೇಶದಿಂದ ಬಂದಿದ್ದರೆ ಅವರು ಮತದಾನದ ಎರಡು ದಿನ ಮುಂಚೆ ಜಿಲ್ಲೆ ತೊರೆಯಬೇಕು ಎಂದರು.

ಮೇ 10ರಂದು ಮತದಾನ ಇದ್ದು ಮೇ 8ರಂದು ಸಂಜೆ 6ಗಂಟೆಗೆ ಹೊರ ಜಿಲ್ಲೆಯವರು ಜಿಲ್ಲೆ ಬಿಡಬೇಕು. ಹೋಟೆಲ್ ಮಾಲೀಕರು ಈ ಬಗ್ಗೆ ಗಮನ ಹರಿಸಬೇಕು. ಪ್ರವಾಸಕ್ಕೆ ಬರುವವರಿಗೆ ಯಾವುದೇ ನಿರ್ಬಂಧ ಇಲ್ಲ. ತಮ್ಮ ಹೋಟೆಲ್‌ಗಳಲ್ಲಿ ಮತದಾನದ ಮಹತ್ವ ತಿಳಿಸುವ ಪೋಸ್ಟರ್‌ಗಳನ್ನು ಹಾಕಿ. ನೈತಿಕ ಮತದಾನ ಬಗ್ಗೆ ತಮ್ಮ ಸಿಬ್ಬಂದಿ ಮೂಲಕ ಹೋಟೆಲಿಗೆ ಬರುವ ಸಾರ್ವಜನಿಕರಿಗೆ ಅರಿವು ಮೂಡಿಸಿ. ಚುನಾವಣಾ ಅಕ್ರಮದ ಬಗ್ಗೆ ದೂರನ್ನು ಸಿ ವಿಜಿಲ್ ಅಪ್ ನಲ್ಲಿ ದೂರು ಸಲ್ಲಿಸಬಹುದು. ಹೋಟೆಲ್ ಸಿಬ್ಬಂದಿ ಮತದಾನ ಮಾಡಲು ವೇತನ ಸಹಿತ ರಜೆ ನೀಡುವಂತೆ ಹೇಳಿದರು.

ಒಣ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ ಆಗಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೋಟೆಲ್‌ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ದಿನದ ಎಲ್ಲಾ ಸಮಯದಲ್ಲೂ ಚಾಲ್ತಿಯಲ್ಲಿರಬೇಕು. ಜತೆಗೆ 30ದಿನಗಳ ಸಿಸಿ ಟಿವಿ ಫುಟೆಜ್ ಇರಬೇಕು. ನಿರಂತರ ವಿದ್ಯುತ್ ಸೌಲಭ್ಯ ಇರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಚುನಾವಣಾ ತಹಸೀಲ್ದಾರ್ ರಾಮಪ್ರಸಾದ್ ಸೇರಿದಂತೆ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು.

Gayathri SG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

19 mins ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

46 mins ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

2 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

2 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

2 hours ago