Categories: ಮೈಸೂರು

ಮೈಸೂರು: ಶಾಲೆಗಳು ಎಲ್ಲ ಮಕ್ಕಳಿಗೂ ಸುರಕ್ಷಿತ ಸ್ಥಳವಾಗಲಿ- ಡಿಸಿ

ಮೈಸೂರು: ಯಾವುದೇ ಸಮಸ್ಯೆಗಳು ಇಲ್ಲದೆ ಶಾಲೆಗಳು ಎಲ್ಲಾ ಮಕ್ಕಳಿಗೂ ಸುರಕ್ಷಿತ ಸ್ಥಳವಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜವಹಾರ್ ನವೋದಯ ವಿದ್ಯಾಲಯದ ನಿರ್ವಹಣಾ ಸಮಿತಿಯೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜವಹಾರ್ ನವೋದಯ ಶಾಲೆಯ ವಿನ್ಯಾಸ, ಫಲಿತಾಂಶ, ಹಾಗೂ ಶಾಲೆಯ ಸಮಸ್ಯೆಗಳ ಬಗ್ಗೆ ಆಲಿಸಿ, ಶಾಲೆಯಲ್ಲಿ ಮಕ್ಕಳಿಗೆ ಗುಡ್ ಟಚ್, ಬ್ಯಾಡ್ ಟಚ್ ಕುರಿತು ತಿಳಿದಿರಬೇಕು. ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಬೇಕು. ಪರಿಸರ ಸ್ನೇಹಿ ವಾತಾವರಣವಿರಬೇಕು ಮತ್ತು ಹೊರಗಿನ ಸಂಪನ್ಮೂಲ ವ್ಯಕ್ತಗಳೊಡನೆ ಆಗಾಗ್ಗೆ ಸಂವಾದ, ಚರ್ಚೆಗಳನ್ನು ಏರ್ಪಡಿಸಿ ಎಂದು ತಿಳಿಸಿದರು.

ಶಾಲೆಯ ಪ್ರಾಂಶುಪಾಲರು ಮಾತನಾಡಿ, 24ಗಂಟೆಗಳ ವಿದ್ಯುಚ್ಛಕ್ತಿ, ಶಾಲಾ ವಾಹನ, ಮಳೆ ನೀರು ಕೊಯ್ಲು, ಶಾಲೆಯಲ್ಲಿ ತ್ಯಾಜ್ಯ ನಿರ್ವಹಣೆ, ೪೦೦ಮೀ. ಟ್ರ್ಯಾಕ್, ಬಾಸ್ಕೆಟ್ ಬಾಲ್ ಗ್ರೌಂಡ್, ಬಿಸಿ ನೀರಿನ ವ್ಯವಸ್ಥೆ, ಹಾಗೂ 4 ಅಧಿಕ ತರಗತಿ ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜವಾಹರ್ ನವೋದಯ ವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ, ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ಪೋಷಕರು ಪಾಲ್ಗೊಂಡಿದ್ದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago