News Karnataka Kannada
Monday, April 29 2024
ಮೈಸೂರು

ಮೈಸೂರು: ದಸರಾ ವೇದಿಕೆ ಸದ್ಬಳಕೆ ಮಾಡಿಕೊಳ್ಳಿ- ನಾಗತಿಹಳ್ಳಿ ಚಂದ್ರಶೇಖರ್

Mysuru: Make good use of dasara platform: Nagathihalli Chandrasekhar
Photo Credit : By Author

ಮೈಸೂರು: ದಸರಾದ ವೇದಿಕೆಯನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಚಲನಚಿತ್ರ ಹಿರಿಯ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಸಲಹೆ ನೀಡಿದ್ದಾರೆ.

ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ನಡೆದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ದಗೊಳ್ಳುತ್ತದೆ. ಅಂತಹ ವೇದಿಕೆಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು.

ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು. ಯಾವುದನ್ನೂ ಮೂರು ದಿನಗಳಲ್ಲಿ ಕಲಿಯಲು ಸಾಧ್ಯವಿಲ್ಲ. ಇಲ್ಲಿಗೆ ಬಂದರೆ ಯಾರೇ ಆಗಲಿ ಬರಿ ಕೈಯಲ್ಲಿ ಹೋಗಬಾರದು. ಏನನ್ನಾದರೂ ಕಲಿತು ಹಾಗೂ ಪಡೆದುಕೊಂಡು ಹೋಗಬೇಕು. ಆಸಕ್ತಿಯಿಂದ ಕಲಿಯಬೇಕು ಹಾಗೂ ಸಮಾಜದ ಜೊತೆ ಒಡನಾಟವಿಟ್ಟುಕೊಳ್ಳುವುದರಿಂದ ಪ್ರತಿಭೆ ಮೊನಚುಗೊಳ್ಳುತ್ತದೆ ಎಂದು ಹೇಳಿದರು.

ಸಂಗೀತ, ಸಾಹಿತ್ಯ, ನಾಟಕಗಳ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿರುವ ಸಿನಿಮಾದಾಚೆಗೆ ಇಂದು ವೆಬ್ ಸಿರೀಸ್, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ಅವುಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟು ಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡುವುದು ಅಗತ್ಯವಾಗಿದೆ ಎಂದರು.

ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಹಲವರು ಉಪಸ‍್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು