Categories: ಮೈಸೂರು

ಮೈಸೂರು: ಫೆ.26, ಮಕ್ಕಳಿಗೆ ಸಾಮೂಹಿಕ ಉಚಿತ ಅಕ್ಷರಾಭ್ಯಾಸ

ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮತ್ತು ಬ್ರಹ್ಮಿಭೂತ ಶ್ರೀ ವಾಸುದೇವ ಮಹರಾಜ್ ಫೌಂಡೇಶನ್ ಸಹಯೋಗದಲ್ಲಿ ಫೆ.26ರಂದು ಭಾನುವಾರ ಬೆಳಗ್ಗೆ 8 ಘಂಟೆಯಿಂದ ಎಲ್ಲ ಜನಾಂಗದವರಿಗೆ ಉಚಿತವಾಗಿ ಸಾಮೂಹಿಕ‌ ಅಕ್ಷರಾಭ್ಯಾಸ ಹಮ್ಮಿಕೊಳ್ಳಲಾಗಿದೆ.

ಈ ಕುರಿತಂತೆ ಕೆಎಂಪಿಕೆ ಟ್ರಸ್ಟ್ ಕಾರ್ಯದರ್ಶಿ ಅಜಯ್ ಶಾಸ್ತ್ರಿ ಮಾಹಿತಿ ನೀಡಿದ್ದು ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್‌ ಶಾಲೆಯಲ್ಲಿ ಫೆ.26ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಪ್ರತಿಯೊಬ್ಬ ನಾಗರಿಕನಿಗೂ ಜೀವಿಸಲೂ ಮನೆ ಆಹಾರ ಬಟ್ಟೆ ಮೂಲಭೂತ ಸೌಲಭ್ಯವಾದರೇ, ಹುಟ್ಟಿದ ಮಗುವಿಗೂ ಅನ್ನ ಅಕ್ಷರ ಆರೋಗ್ಯ ಬದುಕಲು ಪ್ರಮುಖ‌ ಭಾಗ, ಹಾಗಾಗಿ ಮಗುವಿಗೆ ಮಾತನಾಡುವ ಭಾಷೆ ಮತ್ತು ವಿದ್ಯೆ ಕಲಿಸುವ ಪ್ರಾರಂಭ ಹಂತ ಅಕ್ಷರಾಭ್ಯಾಸ ಇದು ಪೋಷಕರ ಮೂಲ ಕರ್ತವ್ಯ ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು,ತಾಯಿಯೇ ಮೊದಲ ಗುರು, ಮಗುವಿಗೆ ಅಕ್ಷರಭ್ಯಾಸ ಎನ್ನುವುದು ಜ್ಞಾನದೇಗುಲದ ಪ್ರಮುಖ ಘಟ್ಟವಾಗಿದೆ.

ಆದ್ದರಿಂದ ಮಹರ್ಷಿ ಶಾಲೆಯಲ್ಲಿ ನಡೆಯಲಿರುವ ಸಾಮೂಹಿಕ ಉಚಿತ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ಜನಾಂಗದವರು ತಮ್ಮ, 2ವರ್ಷದಿಂದ 5ವರ್ಷದ ವಯೋಮಿತಿ ಒಳಗಿನ ಮಕ್ಕಳು ಅವರ ಪೋಷಕರೊಡನೆ ಅಕ್ಷರಾಭ್ಯಾಸದಲ್ಲಿ ಭಾಗವಹಿಸಲು 9880752727 7829067769 ಸಂಪರ್ಕಿಸಬಹುದು, ನಮ್ಮ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಸ್ಲೇಟು, ಬಳಪ ಇನ್ನಿತರ ಸಾಮಾಗ್ರಿಗಳನ್ನ ಉಚಿತವಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ತಲಕಾಡು ಶುಕಶಂಕರ ಪೀಠ ಬಾಲಕೃಷ್ಣಾನಂದ ಮಹಾಸಂಸ್ಥಾನಂನ  ಗೋವಿಂದಾನಂದ ಸರಸ್ವತಿ ಮಹಾಸ್ವಾಮೀಜಿ ಸಾನಿಧ್ಯ ವಹಿಸುವರು.  ಶಾಸಕರಾದ ಎಸ್.ಎ ರಾಮದಾಸ್‌ ಉದ್ಘಾಟಿಸುವರು. ಮೈಸೂರು ಬ್ರಾಹ್ಮಣ ಸಂಘ ಅಧ್ಯಕ್ಷ ಡಿಟಿ. ಪ್ರಕಾಶ್ ಅಧ್ಯಕ್ಷತೆ ವಹಿಸುವರು.

ಮಹಾಪೌರರಾದ ಶಿವಕುಮಾರ್, ಬಿಜೆಪಿ ನಗರ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ, ಮೂಡ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ, ಕಾಂಗ್ರೆಸ್ ಮುಖಂಡರಾದ ಎನ್ಎಂ ನವೀನ್ ಕುಮಾರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾನಂದೀಶ್, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥರಾದ ಮಹೇಶ್ ಶೆಣೈ, ನಗರಪಾಲಿಕಾ ಸದಸ್ಯರಾದ ಮಾವಿ‌. ರಾಮಪ್ರಸಾದ್, ನಂಜುಂಡಸ್ವಾಮಿ‌, ಇನ್ನಿತರರು ಭಾಗವಹಿಸಲಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಹರ್ಷಿ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಣಾಧಿಕಾರಿ ತೇಜಸ್ ಶಂಕರ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಕಾರ್ಯದರ್ಶಿ ಅಜಯ್ ಶಾಸ್ತ್ರಿ, ವ್ಯಂಗ್ಯ ಚಿತ್ರಗಾರ ಕಾರ್ಟೂನ್ ನಾಗೇಂದ್ರಬಾಬು, ಜೀವಧಾರ ರಕ್ತನಿಧಿ ಕೇಂದ್ರದ ಎಸ್.ಈ ಗಿರೀಶ್, ಕಡಕೊಳ ಜಗದೀಶ್, ಇನ್ನಿತರರು ಇದ್ದರು

 

Ashika S

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 min ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

26 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

37 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

48 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

58 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago