News Karnataka Kannada
Friday, May 03 2024
ಮೈಸೂರು

ಮೈಸೂರು: ಮುದ್ದು ಬಾಲರಾಧಾಕೃಷ್ಣ ವೇಷಭೂಷಣ ಸ್ಪರ್ಧೆ

Mysuru: Muddu Balaradhakrishna Costume Competition
Photo Credit :

ಮೈಸೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 6 ವರ್ಷದೊಳಗಿನ ಮಕ್ಕಳಿಗೆ ಮುದ್ದುಬಾಲರಾಧಾಕೃಷ್ಣ ವೇಷಭೂಷಣ ಸ್ಪರ್ಧೆಯನ್ನು ಆ.19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರ ತನಕ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಿಜೇತರಾದ ಮಕ್ಕಳಿಗೆ ಮೊದಲನೇ ಬಹುಮಾನ 2222, ದ್ವಿತೀಯ ಬಹುಮಾನ 1111, ತೃತೀಯ ಬಹುಮಾನ 555ರೂ ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಆಭಿನಂದಿಸಲಾಗುವುದು. ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ. ಸ್ಪರ್ಧೆಗೆ ಭಾಗವಹಿಸುವ ಮಗುವಿನ ಭಾವಚಿತ್ರ ಹಾಗೂ ಜನನ ಪ್ರಮಾಣ ಪತ್ರವನ್ನು 9880752727/ 7829067769 ಈ ನಂಬರ್ ಗೆ ವಾಟ್ಸಪ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

Photo credit: Pixabay

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು