Categories: ಮೈಸೂರು

ಮೈಸೂರು: ಮಹಾರಾಷ್ಟ್ರ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಮೈಸೂರು: ಮಹಾರಾಷ್ಟ್ರ ಸರ್ಕಾರದ ಗೂಂಡಾಗಿರಿ, ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರ ಸರ್ಕಾರ ಗಡಿ ಕ್ಯಾತೆ ತೆಗೆದು ಉದ್ಧಟತನ ಪ್ರದರ್ಶಿಸುತ್ತಿದೆ. ಬೆಳಗಾವಿ ನಮ್ಮ ಅಭಿಬಾಜ್ಯ ಅಂಗ. ಬೆಳಗಾವಿ, ನಿಪ್ಪಾಣಿ, ಕಾರವಾರ ಕನ್ನಡಿಗರ ಅವಿಭಾಜ್ಯ ಅಂಗ. ಯಾವುದೇ ಕಾರಣಕ್ಕೂ ಒಂದು ಅಂಗುಲ ಜಾಗವನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಸೊಲ್ಲಾಪುರ, ಅಕ್ಕಲ ಕೋಟೆ, ಜತ್ತ ಹಾಗೂ ಅರ್ಧ ಭಾಗ ಮುಂಬೈ ಕರ್ನಾಟಕಕ್ಕೆ ಸೇರಬೇಕು. ಸುಮ್ಮನೆ ಗಡಿ ಕ್ಯಾತೆ ತೆಗೆದು ಮಹಾರಾಷ್ಟ್ರ ಸರ್ಕಾರ ತೊಂದರೆ ಕೊಡುತ್ತಿದೆ. ಇದರ ವಿರುದ್ಧ ಕರ್ನಾಟಕ ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ಸುತ್ತಮುತ್ತಲಿನ ನಮ್ಮ ಶಾಸಕರು ಮರಾಠರ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನಮ್ಮ ಬಸ್‌ಗಳಿಗೆ ಮಸಿ ಬಳೆದರೆ ಮಹಾರಾಷ್ಟ್ರದ ಮೇಲೆ ದೊಡ್ಡ ದಾಳಿ ಮಾಡುತ್ತೇವೆ. ಗಡಿಗಳನ್ನು ಬಂದ್ ಮಾಡಿ ಮಹಾರಾಷ್ಟ್ರದವರನ್ನು ಒಳಗೆ ಬರಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮೈಸೂರು ಬಸ್ ನಿಲ್ದಾಣ ವಿವಾದ ಕುರಿತು ಮಾತನಾಡಿ, ಇದು ಇಬ್ಬರು ಅವಿವೇಕಿಗಳ ಜಗಳ. ಸಂಸದ ಪ್ರತಾಪ್ ಸಿಂಹಗೆ ತಲೇನೂ ಇಲ್ಲ, ಬುದ್ದೀನೂ ಇಲ್ಲ, ಅತ್ಯಂತ ಸಣ್ಣ ವ್ಯಕ್ತಿ. ಕೆಲಸ ಮಾಡುವುದು ಬಿಟ್ಟು ಒಂದಲ್ಲ ಒಂದು ರಗಳೆ ತೆಗೆಯುತ್ತಿದ್ದಾರೆ.

ಇತ್ತೀಚೆಗೆ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಾಯಿಸಿದರು. ಬದಲಾಯಿಸಿದ ತಕ್ಷಣ ಮೈಸೂರು ಆಕಾಶಕ್ಕೆ ಹೊರಟು ಹೋಯ್ತಾ? ಮೈಸೂರು, ರೈಲ್ವೆ ನಿಲ್ದಾಣ ಹಾಗೇ ಉಳಿದಿಲ್ಲವೆ? ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ನಿರ್ಮಿಸಿರುವ ಬಸ್ ನಿಲ್ದಾಣದ ಡೂಮ್ ತೆಗೆದಿದ್ದು ಸರಿಯಲ್ಲ. ತಲೆಗೊಂದು ಟೋಪಿ ಹಾಕಿ, ಕೋಟು ಹಾಕಿ ಬಂದರೆ ನಾನು ಮುಸಲ್ಮಾನ ಆಗುತ್ತೇನಾ? ಇದು ಸಣ್ಣತನ, ಅವಿವೇಕತನ. ಇದರಿಂದ ಮೈಸೂರಿಗೆ ಒಳ್ಳೆಯದಾಗುವುದಿಲ್ಲ ಎಂದು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ತಾಯೂರು ವಿಠಲಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Sneha Gowda

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

19 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

31 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

49 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

57 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

2 hours ago