Categories: ಮೈಸೂರು

ಮೈಸೂರು: ಭಗವದ್ಗೀತೆ ಪಠಣದಿಂದ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ

ಮೈಸೂರು: ಆಳವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿರುವ ಭಗವದ್ಗೀತೆಯನ್ನು ನಿತ್ಯ ಪಠಣ ಮಾಡುವುದರಿಂದ, ಮನುಷ್ಯನ ಜೀವನ ಮತ್ತು ವ್ಯಕ್ತಿತ್ವದ ಸಮಗ್ರ ಬೆಳವಣಿಗೆಯಾಗುತ್ತದೆ ಎಂದು ಸುಪ್ರಸಿದ್ಧ ಪ್ರವಚನಕರಾದ ಪಂ.ರಘೋತ್ತಮಾಚಾರ್ಯ ನಾಗಸಂಪಿಗೆ ಅಭಿಪ್ರಾಯಪಟ್ಟರು.

ಮೈಸೂರು ನಗರದ ಅಗ್ರಹಾರದಲ್ಲಿರುವ ಉತ್ತರಾದಿಮಠದ ರಸ್ತೆಯಲ್ಲಿರುವ ಶ್ರೀ ಉತ್ತರಾದಿ ಮಠದ ಆವರಣದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೀತೆಯ ಭಾಷೆ ಸುಲಭವಾಗಿ ಅರಿಯುವಷ್ಟು ಸರಳವಾಗಿದ್ದರೂ ಆಳವಾದ ಅರ್ಥಗಳನ್ನು ಅದು ಒಳಗೊಂಡಿದೆ. ಆಧ್ಯಾತ್ಮಿಕವಾಗಿ ಅಷ್ಟೇ ಅಲ್ಲದೆ, ಬದುಕಿಗೂ ಗೀತೆ ಮಾರ್ಗದರ್ಶಿಯಾಗಿದೆ ಎಂದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್ ಮಾತನಾಡಿ, ಭಗವದ್ಗೀತೆ, ಮಾನವೀಯ ಮೌಲ್ಯಗಳ ಅಮೂಲ್ಯ ಗ್ರಂಥ, ಭಗವದ್ಗೀತೆ ಗ್ರಂಥವಷ್ಟೇ ಅಲ್ಲ; ಜೀವನದ ಮಾರ್ಗದರ್ಶಕವೂ ಆಗಿದೆ. ಭಗವದ್ಗೀತೆಯಲ್ಲಿ ವಿಶ್ವ ಬಂಧುತ್ವ ಸಂದೇಶ ಇದೆ. ಅದು ಸತ್ಯ, ನ್ಯಾಯ, ನೀತಿ, ಧರ್ಮವನ್ನು ಸಾರಿದೆ ಎಂದರು.

ಶ್ರೀ ಉತ್ತರಾದಿ ಮಠದ ಮಠ ಆಡಳಿತ ಅಧಿಕಾರಿ ಪಂಡಿತ್ ಅನಿರುದ್ಧ ಆಚಾರ್ಯ ಪಾಂಡುರಂಗಿ, ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಸ್ ಬಿ ವಾಸುದೇವ್ ಮೂರ್ತಿ, ಎಚ್‌ ಜಿ ಗಿರಿಧರ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಕೆ ಎಮ್ ನಿಶಾಂತ್, ಕಡಕೋಳ ಜಗದೀಶ್, ರಂಗನಾಥ್, ಟಿ ಎಸ್ ಅರುಣ್, ರವಿಕುಮಾರ್, ಜ್ಯೋತಿ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿದ್ದರು.

 

Sneha Gowda

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

7 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

22 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago