News Karnataka Kannada
Monday, April 29 2024
ಮೈಸೂರು

ಮೈಸೂರು: ಎಸ್.ಟಿ.ಸೋಮಶೇಖರ್ ಅವರಿಂದ ಪ್ರಧಾನಿ ಮೋದಿ ಕುಟುಂಬಸ್ಥರ ಭೇಟಿ, ಆರೋಗ್ಯ ವಿಚಾರಣೆ

S.T. Somashekar meets PM Modi's family, enquires about his health
Photo Credit : News Kannada

ಮೈಸೂರು:  ತಾಲೂಕು ಕಡಕೊಳ ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದೇವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಹ್ಲಾದ್ ಮೋದಿಯವರು ಹಾಗೂ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ವಿಶೇಷ ವಿಮಾನದ ಮೂಲಕ ಅಹಮದಾಬಾದ್‌ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಪಾಲಿಕೆ ಮಹಾಪೌರರಾದ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು