ಮೈಸೂರು

ಮೈಸೂರು: ಎಡಿಜಿಪಿ ಎದುರು ಸ್ಯಾಂಟ್ರೋ ರವಿಯ ಸತ್ಯಾಂಶ ಬಯಲು ಮಾಡಿದ ಆತನ ನಾಲ್ಕನೇ ಪತ್ನಿ

ಮೈಸೂರು: ರಾಜಕಾರಣಿಗಳ ನಿದ್ದೆಗೆಡಿಸಿದ ಮತ್ತು ಸಾವಿರಾರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಸ್ಯಾಂಟ್ರೋ ರವಿಯ ಪಾಪದ ಕೊಡ ತುಂಬಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪ್ರತಿ ದಿನವೂ ಆತನ ಕರ್ಮಕಾಂಡಗಳನ್ನು ಮಾಧ್ಯಮಗಳು ಬಿಚ್ಚಿಡುತ್ತಿದ್ದು, ಜನರೇ ಆತನ ವಿರುದ್ಧ ರೊಚ್ಚಿಗೇಳುವಂತೆ ಮಾಡುತ್ತಿದೆ.

ಚುನಾವಣೆ ಸಂದರ್ಭದಲ್ಲಿಯೇ ಆತನ ಕರ್ಮಕಾಂಡ ಬಯಲಾಗಿದ್ದು, ರಾಜಕಾರಣಿಗಳೊಂದಿಗಿನ ಈತನ ಸಖ್ಯ ಜಗಜ್ಜಾಹೀರಾಗುತ್ತಿದೆ. ರಾಜಕಾರಣಿಗಳು ಸೇರಿದಂತೆ ಗಣ್ಯರಿಗೆ ಈತ ಹೆಣ್ಣುಮಕ್ಕಳನ್ನು ಸಾಗಾಟ ಮಾಡುತ್ತಿರುವ ವಿಚಾರ ಹಿಂದೆಯೇ ಬಯಲಾಗಿತ್ತು. ಆದರೆ ರಾಜಕಾರಣಿಗಳೊಂದಿಗೆ ಸಖ್ಯ ಹೊಂದಿರುವ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಯಲಿಗೆಳೆದ ನಂತರ ಇದೀಗ ಸ್ಯಾಂಟ್ರೋ ರವಿಯ ಕರ್ಮಕಾಂಡ ಬಿಚ್ಚಿಕೊಳ್ಳುತ್ತಾ ಹೋಗುತ್ತಿದೆ.

ಸುಂದರ ಹೆಣ್ಣುಮಕ್ಕಳನ್ನು ಮರಳು ಮಾಡಿ ಮದುವೆಯಾಗುವುದಾಗಿ ನಂಬಿಸಿ ಅವರ ಬದುಕನ್ನೇ ಹಾಳುಮಾಡುತ್ತಿದ್ದ ಬಗ್ಗೆ ಅಲ್ಲದೆ ಗಣ್ಯರೊಂದಿಗೆ ಹಾಸಿಗೆ ಹಂಚಿಕೊಳ್ಳಲು ಒತ್ತಾಯ ಮಾಡುತ್ತಿದ್ದ ಒಪ್ಪದಿದ್ದರೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ವಿಚಾರವನ್ನು ಇದೀಗ ನಾಲ್ಕನೇ ಹೆಂಡತಿ ಎಡಿಜಿಪಿ ಅಲೋಕ್ ಕುಮಾರ್ ಎದುರು ಮೈಸೂರಿನಲ್ಲಿ ಬಿಚ್ಚಿಟ್ಟಿದ್ದಾಳೆ. ಅಲ್ಲದೆ ಹಲವು ರಹಸ್ಯಗಳನ್ನು ತಿಳಿಸಿದ್ದಾಳೆ.

ಇನ್ನೊಂದೆಡೆ ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರುಶು ಕೂಡ ಹಾಜರಾಗಿ ಸ್ಯಾಂಟ್ರೊ ರವಿಯ ಬಗ್ಗೆ ಫೋಟೋ, ವಿಡಿಯೋ ಸೇರಿದಂತೆ ದಾಖಲಾತಿಯ ಸಾಕ್ಷ್ಯ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅಲೋಕ್ ಕುಮಾರ್ ಅವರು ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಅವರು ಇಂಟರ್ ನ್ಯಾಷನಲ್ ಇಮಿಗ್ರೇಷನ್ ಚೆಕ್ ಪೋಸ್ಟ್ ನಲ್ಲಿ ಸ್ಯಾಂಟ್ರೊ ರವಿ ಬಗ್ಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಆತನ ಪತ್ನಿ ವನಜಾಕ್ಷಿಯನ್ನು ತನಿಖೆಗೆ ಒಳಪಡಿಸಿದ್ದೇವೆ‌. ಸ್ಯಾಂಟ್ರೊ ರವಿಯ ಹಣಕಾಸು ವ್ಯವಹಾರ, ಬ್ಯಾಂಕ್ ಖಾತೆ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದೇವೆ. ಸ್ಯಾಂಟ್ರೊ ರವಿ ಮೊಬೈಲ್ ಬಳಸುತ್ತಿಲ್ಲ. ಆದ ಕಾರಣ ಸಿಕ್ಕಿ ಬೀಳುತ್ತಿಲ್ಲ. ಆದರೂ ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago