News Karnataka Kannada
Monday, April 29 2024
ಮೈಸೂರು

ಮೈಸೂರು: ಸವಿತಾ ಸಮಾಜಕ್ಕೆ ಸಾಲ, ಸಹಾಯಧನ ನೆರವು

Six newcomers from the coast to vidhanasabh
Photo Credit : Pixabay

ಮೈಸೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಪ್ರದಾಯಿಕ/ ಕುಶಲ ಕರ್ಮಿ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಸವಿತಾ ಮತ್ತು ಇದರ ಉಪಜಾತಿಯವರ ಕುಲಕಸುಬು/ ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಡೋಲು ಮತ್ತು ವಾದ್ಯ, ಬ್ಯಾಂಡ್ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳಿಗೆ ಸಾಲ ಮತ್ತು ಸಹಾಯಧನ ನೆರವು ನೀಡಲು ಆನ್ಲೈನ್ನಲ್ಲಿ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕ/ಕುಶಲ ಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷದವರೆಗೆ ಸಾಲ ಸೌಲಭ್ಯ ಶೇ. 2ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಶೇ. 4 ರ ಬಡ್ಡಿದರದಲ್ಲಿ ಒದಗಿಸಲಾಗುವುದು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿದಾರರ ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.

ಜಿಲ್ಲಾ ವ್ಯವಸ್ಥಾಪಕರ ಕಚೇರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯ ಅವಧಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆಯಿದ್ದು, ಸವಿತಾ ಮತ್ತು ಇದರ ಉಪಜಾತಿಗೆ ಸೇರಿದ ಅರ್ಜಿದಾರರು https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2022ರ ಆಗಸ್ಟ್ 03 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kssd.karnataka.gov.in, ನಿಗಮದ ಸಹಾಯವಾಣಿ ಸಂಖ್ಯೆ: 080-22374832, ಮೊ.ಸಂ: 9606066389 ಅಥವಾ ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು