Categories: ಮೈಸೂರು

ಮೈಸೂರು: ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಯಾತ್ರಾ ಸ್ಥಳಗಳಾಗಿ ಅಭಿವೃದ್ಧಿ

ಮೈಸೂರು: ಬಿಜೆಪಿ ಎರಡು ದಿನಗಳ ರಾಷ್ಟ್ರೀಯ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಯಲ್ಲಿ ರಾಜ್ಯದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಯಾತ್ರಾ ಸ್ಥಳಗಳಾಗಿ ಅಭಿವೃದ್ಧಿ ಪಡಿಸುವುದು, ದಲಿತರ ಮೀಸಲಾತಿ ಪ್ರಮಾಣ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದು, ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ದಲಿತರ ಸಬಲೀಕರಣ, ಕೇಂದ್ರ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವುದು, ಮುಂದಿನ ಚುನಾವಣೆಯಲ್ಲಿ ದಲಿತ ಮತಗಳು ಬಿಜೆಪಿ ಪರ ವಾಲುವಂತೆ ಮಾಡಲು ನಗರದಲ್ಲಿ ನಡೆದ ಮೂರು ದಿನಗಳ ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅಂತ್ಯವಾಗಿದೆ.

ನಗರದ ಲಲಿತಮಹಲ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಎಸ್ಸಿ ಮೋರ್ಚಾ ರಾಷ್ಟ್ರೀಯ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪರಿಶಿಷ್ಟ ಜಾತಿ ಸಮುದಾಯಗಳ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತು ಚರ್ಚಿಸಲು ಸದ್ಯದಲ್ಲಿಯೇ ದಲಿತ ಶಾಸಕರ ನಿಯೋಗದೊಡನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.

ಈ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ರಾಜಕೀಯ ನಿರ್ಣಯಗಳನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಲಾಗುತ್ತದೆ. ನಾವು ರಾಜ್ಯದಲ್ಲಿ ಕೈಗೊಳ್ಳಬೇಕಾದ ತೀರ್ಮಾನವನ್ನು ಮುಖ್ಯಮಂತ್ರಿಗಳೊಡನೆ ಚರ್ಚಿಸುತ್ತೇವೆ. ಈಗ ನಡೆದ ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ದಲಿತರ ಅಭಿವೃದ್ಧಿಪರ ಯೋಜನೆಗಳನ್ನು ಮುಕ್ತಕಂಠದಿಂದ ಸ್ವಾಗತಿಸಿ, ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಯಿತು ಎಂದರು.

ಕಾರ್ಯಕಾರಿಣಿಯಲ್ಲಿ ದೇಶದ ವಿವಿಧೆಡೆಯಿಂದ 139 ಮಂದಿ ಪಾಲ್ಗೊಂಡಿದ್ದರು. ಅಲ್ಲದೆ ಕರ್ನಾಟಕ ಬಿಜೆಪಿಯ ಸಂಘಟನಾತ್ಮಕ 39 ಜಿಲ್ಲೆಗಳ ಪೈಕಿ ೩೫ ಜಿಲ್ಲೆಯಿಂದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಎಲ್ಲರೂ ಈ ಕಾರ್ಯಕಾರಿಣಿ ಆಯೋಜನೆಯ ಶಿಸ್ತು ಬದ್ಧತೆ ಮೆಚ್ಚಿದ್ದಾರೆ. ನಮ್ಮ ಆತಿಥ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್ ಆರ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೇಯರ್ ಶಿವಕುಮಾರ್, ನಗರ ಬಿಜೆಪಿ ಅಧ್ಯಕ್ಷಟಿ.ಎಸ್.ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಕ್ತಾರ ಮಹೇಶರಾಜೇ ಅರಸ್, ಜಿಲ್ಲಾ ವಕ್ತಾರ ವಸಂತಕುವಾರ್ ಹಾಜರಿದ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago