Categories: ಮೈಸೂರು

ಮೈಸೂರು: ರಂಗಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ

ಮೈಸೂರು: ವಿದ್ಯಾರ್ಥಿಗಳ ಸುಪ್ತಪ್ರತಿಭೆ ಹೊರತರಲು ರಂಗೋತ್ಸವಗಳು ಅಗತ್ಯವಾಗಿದ್ದು, ರಂಗಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ನಾಯಕತ್ವ ಮತ್ತು ಸಂಘಟನಾ ಗುಣಗಳು ಬೆಳೆಯುತ್ತವೆ ಎಂದು ಚಲನಚಿತ್ರನಟ ಕಾರ್ತಿಕ್‌ ಮಹೇಶ್‌ ಹೇಳಿದರು.

ಮೈಸೂರು ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಜೆಎಸ್‌ಎಸ್‌ ಕಲಾಮಂಟಪದ ವತಿಯಿಂದ ಆಯೋಜಿಸಿರುವ ಜೆಎಸ್‌ಎಸ್‌ ರಂಗೋತ್ಸವವನ್ನು ಉದ್ಘಾಟಿಸಿ ಮಾತನಾಡಿ,ರಂಗಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದರು.

ಇಂದಿನ ಮಕ್ಕಳು ಮೊಬೈಲ್‌ ಗೀಳಿಗೆ ಸಿಕ್ಕಿ ಅದರಿಂದ ಹೊರಬರಲಾಗದೆ ಪರದಾಡುತ್ತಿದ್ದಾರೆ. ಡೊಳ್ಳುಕುಣಿತ, ಕಂಸಾಳೆಯಂತಹ ನೃತ್ಯಗಳು, ನಾಟಕಗಳು, ಜನಪದಕಲೆಗಳು ಜೀವನದ ಭಾಗವಾಗಬೇಕು. ಜೆಎಸ್‌ಎಸ್‌ ಸಂಸ್ಥೆ ಈ ನಿಟ್ಟಿನಲ್ಲಿ ಒಂದು ವೇದಿಕೆಯನ್ನು ಕಲ್ಪಿಸಿ ಉತ್ತಮ ಕಾರ್ಯವನ್ನು ಮಾಡಿದೆ. ಪಠ್ಯೇತರ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿತ್ತವೆ. ಆಲೋಚನಾಶಕ್ತಿಯನ್ನು ಬೆಳೆಸುತ್ತವೆ ಎಂದು ಹೇಳಿದರು.

ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್‌ರವರು ಜೆಎಸ್‌ಎಸ್‌ ಕಲಾಮಂಟಪಕ್ಕೆ 50 ವರ್ಷಗಳ ಇತಿಹಾಸವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ರಾತ್ರಿಯಿಂದ ಬೆಳಗಿನಜಾವದವರೆಗೂ ನಾಟಕಗಳು ಜರುಗುತ್ತಿದ್ದವು. ಜನರು ಅದೇ ರೀತಿಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಶಿಸುತ್ತಿರುವ ಕಲೆಗಳ ಜೀವಂತಿಕೆಗಾಗಿ ಕಲಾಮಂಟಪದ ವತಿಯಿಂದ ನಿರಂತರವಾಗಿ ವಿದ್ಯಾರ್ಥಿಗಳ ಮೂಲಕ ರಂಗೋತ್ಸವದಂತಹ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿನಿರ್ದೇಶಕ ವಿ.ಎನ್.‌ ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಜೆಎಸ್‌ಎಸ್‌ ಸಂಸ್ಥೆ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ಸಾಂಸ್ಕೃತಿ ಕಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಪೋಷಕರು ಅಂಕಗಳಿಕೆಗೆ ಮಾತ್ರ ಒತ್ತಾಯಿಸದೆ ಇಂತಹ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ನಂತರ ಸಿದ್ಧಾರ್ಥ ಬಡಾವಣೆಯ ಜೆಎಸ್‌ಎಸ್‌ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ʻಒಗಟಿನರಾಣಿʼ ನಾಟಕ ಪ್ರದರ್ಶಿಸಿದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago