News Karnataka Kannada
Wednesday, May 01 2024
ಮೈಸೂರು

ಮೈಸೂರು: ಮಾ.1ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆ

Mysuru: Vijaya Sankalpa Yatra to be held at Male Mahadeshwara Hills on Mar.1
Photo Credit : By Author

ಮೈಸೂರು: ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 1 ರಂದು ನಡೆಯಲಿದ್ದು, ಬೆ.11 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಮೈಸೂರು ವಿಭಾಗದ ಮುಖ್ಯಸ್ಥ ಎಂ. ರಾಜೇಂದ್ರ.ಮಾತನಾಡಿ ಮಾಹಿತಿ ನೀಡಿದ ಅವರು, ವಿಜಯ ಸಂಕಲ್ಪ ಯಾತ್ರೆಯ ಮೂಲಕ ಎಲ್ಲಾ ವಿಧಾನ ಸಭೆ ಕ್ಷೇತ್ರಗಳಲ್ಲಿಯೂ ಕೂಡ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಸವಲತ್ತುಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ವಿಜಯ ಸಂಕಲ್ಪ ಯಾತ್ರೆಯನ್ನು ನಾಲ್ಕು ತಂಡಗಳಾಗಿ ಮಾಡಲಾಗಿದ್ದು. ಮೊದಲನೇ ತಂಡ ಮಾರ್ಚ್ 1 ರಂದು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಲಿಗರನ್ನು ಸೇರಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ನಂತರ ಅದೇ ದಿನ ಹನೂರಿನಲ್ಲಿ ನಡೆಯುವ ಸಭೆಯಲ್ಲಿ ಸುಮಾರು 15 ರಿಂದ 20 ಸಾವಿರ ಜನರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜೆಪಿ ನಡ್ಡಾ ಸಭೆಯನ್ನು ಉದ್ದೇಶಿಸಿ ಮಾತನಾಡುವರು. ಮಾಜಿ ಮುಖ್ಯಮಂತ್ರಿ ಈಶ್ವರಪ್ಪ, ಸಚಿವರಾದ ವಿ. ಸೋಮಣ್ಣ, ವಿ ಸುನೀಲ್ ಕುಮಾರು, ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ಶ್ರೀನಿವಾಸ್ ಪ್ರಸಾದ್ ಹಾಗೂ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಸುಮಾರು 58 ವಿಧಾನ ಸಭೆ ಕ್ಷೇತ್ರಗಳಲ್ಲಿ 18 ಕಡೆ ಸಭೆಗಳು ಹಾಗೂ 35 ರಿಂದ 40ಕಡೆ ರೋಡ್ ಶೋ ಮಾಡಲಾಗುದು ಎಂದು ಹೇಳಿದರು.

ಮಾ.1 ರಿಂದ 2 ರವರೆಗೆ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡಿನಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯುತ್ತದೆ. ಮಾ.3 ರಿಂದ 5 ರವರೆಗೆ ಮೈಸೂರು ಗ್ರಾಮಾಂತರ ಹಾಗೂ ಮೈಸೂರು ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಾಗಿ ತದನಂತರ ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮುಖಾಂತರ ದಾವಣಗೆರೆಯ ಹರಿಹರದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಪನ್ನವಾಗುತ್ತದೆ ಎಂದು ತಿಳಿಸಿದರು.

ದಾವಣಗೆರೆಯಲ್ಲಿ ನಾಲ್ಕು ತಂಡಗಳ ವಿಜಯ ಸಂಕಲ್ಪ ಯಾತ್ರೆ ಸಂಪನ್ನಗೊಳ್ಳುತ್ತದೆ. ಈ ಕಾರ್ಯಕ್ರಮದಲ್ಲಿ ಸುಮಾರು 15 ರಿಂದ 20 ಲಕ್ಷ ಸೇರಿ ದೊಡ್ಡ ಮಟ್ಟದ ರಾಲಿ ನಡೆಸಲಾಗುತ್ತದೆ. ಈ ರಾಲಿಯಲ್ಲಿ ಪ್ರಧಾನಿ ನೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದ ಜನರು ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ತರಬೇಕು ಎಂದು ನಿರ್ಧಾರ ಮಾಡಿಕೊಂಡಿದ್ದಾರೆ. ಮೈಸೂರು-ಬೆಂಗಳೂರು ಹೈವೇ ನೋಡಿದರೆ ಸಾಕು ಬಿಜೆಪಿ ಸರ್ಕಾರದ ಅಭಿವೃದ್ಧಿ ಗೊತ್ತಾಗುತ್ತದೆ ಅದೇ ರೀತಿ ರೈಲ್ವೆ ಹಾಗೂ ವಿಮಾನ ನಿಲ್ದಾಣವನ್ನು ಡಬಲ್ ಇಂಜಿನ್ ಸರ್ಕಾರ ಅಭಿವೃದ್ದಿ ಮಾಡಿದೆ. ಇದನ್ನೂ ನೋಡಿದ ಜನರು ಮತ್ತೆ ಡಬಲ್ ಇಂಜಿನ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮುಂದಿನ ಚುನಾವಣೆಯಲ್ಲಿ ಮತಹಾಕುತ್ತಾರೆ ಎಂದು ತಿಳಿಸಿದರು.

ವಿಜಯ ಸಂಕಲ್ಪ ಯಾತ್ರೆ ಮೂಲಕ ನಮ್ಮ ಸರ್ಕಾರ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು. ಮೈಸೂರು ಭಾಗದಲ್ಲಿ ನಾವು ಮಾಡಿರುವ ಅಭಿವೃದ್ಧಿಯೇ ನಮಗೆ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರನ್ನು ನೀಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ನವರಿಗೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಾಗಿದೆ ಆದ್ದರಿಂದ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿ ಹಾಗೂ ಜನರು ತಮ್ಮ ಕಾಲು ಮೇಲೆ ತಾವು ನಿಂತುಕೊಳ್ಳುವ ನಿಟ್ಟಿನಲ್ಲಿ ರಾಜ್ಯವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನವರು ದಲಿತರ ಮತ ಹಾಗೂ ದಲಿತ ನಾಯಕರನ್ನ ಉಪಯೋಗಿಸಿಕೊಂಡು ಸರ್ಕಾರವನ್ನು ಮಾಡಿ. ದಲಿತ ನಾಯಕ ಶ್ರೀನಿವಾಸ್ ಪ್ರಸಾದ್ ಹಾಗೂ ಹಲವು ದಲಿತ ಮುಖಾಂಡರನ್ನು ಸೋಲಿಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಇರುವ ಮನಸ್ಥಿತಿ ನಮ್ಮ ಪಕ್ಷದಲ್ಲಿ ಇಲ್ಲ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇರಬೇಕು ಇದರಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಹಾಗೂ ರಾಜ್ಯ ಜನರಿಗೆ ನೀಡುವ ಸವಲತ್ತುಗಳು ತಳಮಟ್ಟದವರೆಗೂ ತಲುಪಲು ಅನುಕೂಲವಾಗುತ್ತದೆ. ಆದ್ದರಿಂದ ಮತ್ತೊಮ್ಮೆ 2023 ಚುನಾವಣೆಯಲ್ಲಿ ಗೆದ್ದು ಪೂರ್ಣ ಬಹುಮತದಿಂದ ಸರ್ಕಾರವನ್ನು ಮಾಡುವ ಉದ್ದೇಶದಿಂದ ಇಡೀ ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳ ಸೋಮಶೇಖರ್ ಹಾಗೂ ಇತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು