News Karnataka Kannada
Wednesday, May 08 2024
ಮೈಸೂರು

ಮೈಸೂರು: ಯುವಕ ಯುವತಿಯರಿಂದ ಸ್ವಯಂ ಪ್ರೇರಿತ ರಕ್ತದಾನ

Blood Donation
Photo Credit : By Author

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ  ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ಹಾಗೂ ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಮಾನಸ ಗಂಗೋತ್ರಿಯಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ 85ಯುವಕ ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಈ ವೇಳೆ  ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಆರ್ ಶಿವಪ್ಪ ಅವರು, ಯುವಜನರು ಹೆಚ್ಚಾಗಿ ರಕ್ತದಾನ ಮಾಡಬೇಕು. ಜತೆಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ರಕ್ತದಾನ ಮಾಡುವುದೆಂದರೆ ವ್ಯಕ್ತಿಯೊಬ್ಬನಿಗೆ ಮರುಜೀವ ಕೊಟ್ಟಂತೆ. ರಕ್ತದಾನ ಮಾಡಿದರೆ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಎಂಬ ಗೊಂದಲ ಹಲವರಲ್ಲಿದೆ. ಆದರೆ, ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ’ ಎಂದರು.

ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್  ನಿರ್ದೇಶಕರಾದ ಪ್ರೊ. ಶಂಕರ್ , ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕೃತಿಕಾ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಪ್ರೊ.ಪ್ರಮೋದ್ ಎಂ ಗವಾರಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ಡಿಸ್ಟ್ರಿಕ್ ಸೂಪರ್ ವೈಸರ್  ಸವಿತಾ , ಪ್ರೊ.  ಎಚ್ ಎನ್ ನಾಗೇಂದ್ರ ,ಯಶಸ್ವಿನಿ ಇನ್ನಿತರರು ಹಾಜರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು