Categories: ಮೈಸೂರು

ಮೈಸೂರು: ಸೆ.27ರಿಂದ ಮಹಿಳಾ ದಸರಾ ಕಾರ್ಯಕ್ರಮ ಆರಂಭ

ಮೈಸೂರು: ಮೈಸೂರು ದಸರಾ ಮಹೋತ್ಸವ, ಮಹಿಳಾ ಮತ್ತು ಮಕ್ಕಳ ದಸರಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆ. 27 ರಿಂದ ಅ.1 ರವರೆಗೆ ಮಹಿಳೆಯರಿಗಾಗಿ ಮಹಿಳಾ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಹಿಳಾ ದಸರಾ ಅಂಗವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ. 27 ರಂದು ಬೆಳಗ್ಗೆ 7:30 ರಿಂದ 9:30 ಗಂಟೆಯವರೆಗೆ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(ಶಾಂತ-9380425522), ಸೆ. 28 ರಂದು 12 ರಿಂದ 1 ಗಂಟೆವರೆಗೆ ಜೆ.ಕೆ. ಮೈದಾನದಲ್ಲಿ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿದೆ ದೂರವಾಣಿ ಸಂಖ್ಯೆ: (ಮಂಜುಳ ಇ.ಡಿ.-9590027794).

ಸೆ.28 ರಂದು 1 ರಿಂದ 2 ಗಂಟೆಯವರೆಗೆ ಜೆ.ಕೆ. ಮೈದಾನದಲ್ಲಿ ಒಲೆರಹಿತ ಅಡುಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ದೂರವಾಣಿ ಸಂಖ್ಯೆ: (ಸರೋಜ ಮೇಲ್ವಿಚಾರಕರು-9880239482). ಸೆ. 29 ರಂದು ಮಧ್ಯಾಹ್ನ 2:30 ರಿಂದ 3.30 ರವರೆಗೆ ಜೆ.ಕೆ. ಮೈದಾನದಲ್ಲಿ ಕೇಶ ವಿನ್ಯಾಸ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ದೂರವಾಣಿ ಸಂಖ್ಯೆ(ವಿದ್ಯಾ ಓಂಕಾರ ಗೌಡ ಹಿರಿಯ ಮೇಲ್ವಿಚಾರಕಿ-8073227321). ಸೆ.30 ರಂದು ಸಂಜೆ 4ರಿಂದ 5 ಗಂಟೆವರೆಗೆ ಜೆ.ಕೆ. ಮೈದಾನದಲ್ಲಿ ವೆಜಿಟೇಬಲ್ ಕಾರ್ವಿಂಗ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ದೂರವಾಣಿ ಸಂಖ್ಯೆ (ಸಹನ ಮೇಲ್ವಿಚಾರಕಿ-97415331950) ಅನ್ನು ಸಂಪರ್ಕಿಸಬಹುದಾಗಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

22 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

35 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

51 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

59 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago