Categories: ಮೈಸೂರು

ಮೈಸೂರು: ಅರಮನೆ ಅಂಗಳದಲ್ಲಿ ಯೋಗ ಪ್ರದರ್ಶನ

ಮೈಸೂರು: ಬಾಲ್ಯದಿಂದಲೇ ದೈಹಿಕ ಹಾಗೂ ಮಾನಸಿಕ ಶಿಸ್ತನ್ನು ಅಳವಡಿಸಿಕೊಂಡಲ್ಲಿ ಜೀವನದಲ್ಲಿ ಸಾಧನೆಗಳನ್ನು ಮಾಡಬಹುದು ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಯೋಗ ದಸರಾ ಉಪ ಸಮಿತಿ ವತಿಯಿಂದ ನಗರದ ಅರಮನೆ ಮುಂಭಾಗ ಏರ್ಪಡಿಸಲಾಗಿದ್ದ ಯೋಗ ಪ್ರದರ್ಶನ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾವು ಸಂಭ್ರಮ, ಸಡಗರ ಹಾಗೂ ಸುಂದರವಾದ ಜೀವನ ರೂಪಿಸಿಕೊಳ್ಳಬೇಕಾದಲ್ಲಿ ದೈಹಿಕವಾಗಿ ಸದೃಢರಾಗಿರಬೇಕು. ಮಾನಸಿಕವಾಗಿ ಎಲ್ಲವನ್ನೂ ಎದುರಿಸುವ ಶಕ್ತಿ ಹೊಂದಿರಬೇಕು. ಇದು ಸಾಧ್ಯವಾಗಬೇಕಾದಲ್ಲಿ ಯೋಗದಂತಹ ಚಟುವಟಿಕೆ ಮುಖ್ಯ. ಇದನ್ನು ಪತಂಜಲಿ ಸೂತ್ರವೂ ಹೇಳುತ್ತದೆ ಎಂದರು.

ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಸರ್ವೇ ನಡೆಸಿದ ವೇಳೆ ಸಾಕಷ್ಟು ಮಂದಿ ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಆಯಾಯ ಮೊಹಲ್ಲಾಗಳಲ್ಲಿಯೇ ವಾರದಲ್ಲಿ ಮೂರು ದಿವಸ ಯೋಗ ಕಾರ್ಯಕ್ರಮ ಏರ್ಪಡಿಸಲಾಗುವುದು. ಈ ಮೂಲಕ ಮುಂದಿನ ಐದು ವರ್ಷದಲ್ಲಿ ಮಧುಮೇಹಿಗಳ ಸಂಖ್ಯೆಯನ್ನು ನಿಯಂತ್ರಣಕ್ಕೆ ತರಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಉಪ ಮೇಯರ್ ರೂಪ, ನಗರಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್, ಆಯುಷ್‌ನ ಡಾ.ಲಕ್ಷ್ಮಿನಾರಾಯಣ ಶಣೈ, ಶ್ರೀಹರಿ, ಡಾ.ಪುಷ್ಪ, ಡಾ.ಕುಸುಮ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ಇದೇ ವೇಳೆ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸುರಭಿ, ಅಂಕಿತ ಹಾಗೂ ವರ್ಷಾಳನ್ನು ಸನ್ಮಾನಿಸಲಾಯಿತು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago