News Karnataka Kannada
Friday, May 03 2024
ಮೈಸೂರು

ನಂಜನಗೂಡು: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡಕ್ಕೆ ಫರ್ನಿಚರ್ ಅಂಗಡಿ ಭಸ್ಮ

Fire breaks out at building in Goregaon, 6 dead
Photo Credit : News Kannada

ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡಕ್ಕೆ ಫರ್ನಿಚರ್ ಗಳು ಭಸ್ಮವಾಗಿರುವ ಘಟನೆ ನಂಜನಗೂಡು ನಗರದ ಅಶೋಕಪುರಂ ಬಡಾವಣೆಯಲ್ಲಿ ನಡೆದಿದೆ.

ಸಾಧಿಕ್ ಪಾಷಾ ಎಂಬುವವರಿಗೆ ಸೇರಿದ ಸಾಫಾ ಫರ್ನಿಚರ್ ಅಂಗಡಿಗೆ ರಾತ್ರಿಯ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಇಡೀ ಗೋಡನ್ ಗೆ ಬೆಂಕಿ ತಗುಲಿ, ಬೆಡ್ ಗಳು, ಫರ್ನಿಚರ್ ಗಳು ಸುಟ್ಟು ಕರಕಲಾಗಿವೆ ಅಂಗಡಿಯ ಒಳಗಡೆಯಿದ್ದ ಸಿಲಿಂಡರ್ ಸ್ಫೋಟಗೊಂಡು ಮತ್ತಷ್ಟು ಬೆಂಕಿ ಹೊತ್ತಿ ಉರಿದಿದ್ದು ಸುಮಾರು 60 ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇನ್ನೂ ವಿಷಯ ತಿಳಿದು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಸಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು