Categories: ಮೈಸೂರು

ನಂಜನಗೂಡು: ಕಪಿಲಾದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

ನಂಜನಗೂಡು:  ಎರಡು ದಿನಗಳ ಹಿಂದೆ ಕಪಿಲಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೆಜ್ಜಿಗೆ ಸೇತುವೆ ಬಳಿ ಪತ್ತೆಯಾಗಿದೆ.

ಎರಡು ದಿನಗಳ ಕಾಲ ನಡೆದ ನಿರಂತರ ಶೋಧ ಕಾರ್ಯದಲ್ಲಿ ಮೃತದೇಹ ಕಂಡು ಬಂದಿದೆ. ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದು ಆಕಸ್ಮಿಕ ಅಲ್ಲ  ಸಂಚು ರೂಪಿಸಿ ಕೊಲೆ ಎಂದು ಮೃತ  ಯುವಕ  ಅಬ್ದುಲ್ ರಹೀಮಾ ಪಾಷ ತಂದೆ ಮುನಾವರ್ ಪಾಷಾ ಆರೋಪ ಮಾಡಿದ್ದರು‌

ನಂಜನಗೂಡು ತಾಲ್ಲೂಕು ಹೆಜ್ಜಿಗೆ ಗ್ರಾಮದ ಕಪಿಲಾ ನದಿಯಲ್ಲಿ ಇಬ್ಬರು ಸ್ನೇಹಿತರೊಂದಿಗೆ ಈಜಲು ಹೋಗಿ ಅಬ್ದುಲ್  ರಹೀಂ ಪಾಷಾ ನಾಪತ್ತೆಯಾಗಿದ್ದರು. ಇಂದು ಮೃತದೇಹ ದೊರೆತಿದೆ. ಪ್ರಕರಣದ ಹಿಂದೆ ಮೃತನ ತಂದೆ ಕೊಲೆ ಸಂಚಿನ ಅನುಮಾನ ವ್ಯಕ್ತಪಡಿಸಿದ್ದಾರೆ.

ತುಂಬಿ ತುಳುಕುತ್ತಿರುವ  ಕಪಿಲಾ ನದಿಗೆ ಬಿದ್ದಿದ್ದ ಅಬ್ದುಲ್ ಸೇರಿ ಮೂವರು ಯುವಕರಲ್ಲಿ ಇಬ್ಬರು ಈಜಿ ದಡ ಸೇರಿದ್ದರು. ಮಗನನ್ನು ಸಮಯ ನೋಡಿ ಕೊಲೆ ಮಾಡಿದ್ದಾರೆ.ಆತ ಬಟ್ಟೆ ಚಪ್ಪಲಿ ಬಿಚ್ಚದೆ ನೀರಿಗೆ ಬಿದ್ದಿದ್ದಾನೆ. ಈ ಹಿಂದೆ ಒಮ್ಮೆ ಕೊಲೆ ಯತ್ನ  ನಡೆದಿದೆ. ಯಾವತ್ತಿದ್ರೂ ಮುಗಿಸ್ತೀನಿ ಅಂತ ಎಚ್ಚರಿಕೆ ಕೊಟ್ಟಿದ್ರು. ಆತನ ಜೊತೆಯವರೇ ಕೊಲೆ ಮಾಡಲು ಈ ರೀತಿ ಮಾಡಿದ್ದಾರೆಂದು ಮೃತನ ತಂದೆ ಮುನಾವರ್  ಪಾಷ ಗಂಭೀರ ಆರೋಪ ಮಾಡಿದ್ದರು.

ಇದೀಗ ಪೊಲೀಸರ ತನಿಖೆಯಿಂದ ಸತ್ಯಾಂಶ ತಿಳಿಯಬೇಕಿದೆ ಈಗಾಗಲೇ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಯುವಕನ ಶವವನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ  ಕೊಂಡೊಯ್ಯಲಾಗಿದೆ.

Sneha Gowda

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

30 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

32 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

55 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago