ಮೈಸೂರು

ನಂಜನಗೂಡು: ಗೃಹಲಕ್ಷ್ಮಿ ಯೋಜನೆಯಲ್ಲಿ ಹಗಲು ದರೋಡೆಗೆ ಇಳಿದ ಆಹಾರ ಇಲಾಖೆ ಅಧಿಕಾರಿಗಳು

ನಂಜನಗೂಡು:  ಇನ್ನು ಜಾರಿಯಾಗದ ಗೃಹಲಕ್ಷ್ಮಿ ಯೋಜನೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಗಲು ದರೋಡೆಗೆ ಇಳಿದಿದ್ದಾರೆ ಎಂದು  ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ಸತೀಶ್ ಆರೋಪಿಸಿದರು.

ನಂಜನಗೂಡು ನಗರದ ತಾಲೂಕು ಆಡಳಿತ ಭವನದ ಆಹಾರ ಇಲಾಖೆ ಕಚೇರಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇನ್ನೂ  ಚರ್ಚೆಗಳು ನಡೆಯುತ್ತಿವೆ. ಯಾರಿಗೆಲ್ಲ ಯೋಜನೆ ಫಲ ಕೊಡಬೇಕು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಸರ್ಕಾರದಿಂದ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಗೃಹಲಕ್ಷ್ಮಿ ಯೋಜನೆ ಬರಬೇಕು ಎಂದರೆ ನೀವು ರೇಷನ್ ಕಾರ್ಡ್ ನಲ್ಲಿ ಮನೆಯ ಮುಖ್ಯಸ್ಥೆ ಎಂದು ಮಾಡಿಸಿಕೊಳ್ಳಬೇಕು ಎಂದು ತಪ್ಪು ಸಂದೇಶಗಳನ್ನು ನೀಡಿದ್ದಾರೆ.  ಸಾಕಷ್ಟು ಜನರು ಸರ್ಕಾರಿ ಕಚೇರಿಗೆ ರೇಷನ್ ಕಾರ್ಡ್ ಮಾಡಿಕೊಡಿ  ಎಂದು ಅಲೆದಾಡುತ್ತಿದ್ದಾರೆ.

ಕಚೇರಿಗೆ ಆಗಮಿಸುವ ಜನರಿಂದ 40ರಿಂದ 50 ರೂಪಾಯಿ ತನಕ ಹಣವನ್ನು ವಸೂಲಿ ಮಾಡುತ್ತಿದ್ದಾರೆ.   ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲೂ ಕೂಡ ಈ ರೀತಿ ದಂಧೆ ನಡೆಯುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ತಡೆಗಟ್ಟಿ ಜನರಿಗೆ ಮಾಹಿತಿಯನ್ನು ನೀಡಬೇಕು ಎಂದು ಒತ್ತಾಯ ಮಾಡಿದರು. ಇನ್ನು ಆಹಾರ ಇಲಾಖೆಯ ಶಿರಸ್ತೆದಾರ್ ಅರವಿಂದ್ ಜೊತೆ ರೈತರ  ಮಾತಿನ ಚಕಮಕಿ ನಡೆಯಿತು.

Ashika S

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

14 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

41 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

50 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago