Categories: ಮೈಸೂರು

ಮಂಡ್ಯದ ಕೆರೆಯಲ್ಲಿ ನಂಜನಗೂಡು ಯುವತಿಯ ಶವ ಪತ್ತೆ

ಮೈಸೂರು: ನಂಜನಗೂಡು ತಾಲೂಕಿನ ಯುವತಿಯೊಬ್ಬಳ ಶವ ಜಿಲ್ಲೆಯ ಬೂದನೂರು ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಎಂಬ ಯುವತಿಯ ಶವವೆ ಕೆರೆಯಲ್ಲಿ ಪತ್ತೆಯಾಗಿರುವುದು. ಈಕೆ ನಂಜನಗೂಡು ಮೂಲದ ಯುವತಿ ಎಂದು ಗುರುತು ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಹೇಳಲಾಗುತ್ತಿದೆ.

ಆ ಬಳಿಕ ಯುವತಿ ತನ್ನ ಬ್ಯಾಗ್, ಚಪ್ಪಲಿಯನ್ನು ಕೆರೆಯ ದಡದಲ್ಲೇ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸಂಜೆ ಕೆರೆ ದಡದಲ್ಲಿದ್ದ ಬ್ಯಾಗ್ ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನೆ ಮಾಡಿದ್ದಾರೆ.

Sneha Gowda

Recent Posts

ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದ ಟಿಡಿಪಿ

ಚುನಾವಣೆಯಲ್ಲಿ ಗೆದ್ದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು…

1 min ago

ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಸಂಗೀತ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್‌ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ…

18 mins ago

ಕೋವಿಶೀಲ್ಡ್ ಮಗಳ ಸಾವಿಗೆ ಕಾರಣ: ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತಂದೆ

ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು…

32 mins ago

ಟಿ20 ವಿಶ್ವಕಪ್‌: ಅ.6ರಂದು ಭಾರತ-ಪಾಕಿಸ್ತಾನ ಫೈಟ್‌

ಜೂನ್‌ನಲ್ಲಿ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ…

37 mins ago

ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದೆಯೋ ಅದ್ಕಕೆ ಅಲ್ಲಿನ ಆಂತರಿಕ ರಾಜಕೀಯ ಕಾರಣ: ಎಸ್ ಜೈಶಂಕರ್

ಖಲಿಸ್ತಾನಿ  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ…

45 mins ago

ಕಾಪು ಪಿಲಿಕೋಲ ಸಂಪನ್ನ: ಓರ್ವನನ್ನು ಸ್ಪರ್ಶಿಸಿದ ಪಿಲಿ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…

1 hour ago