Categories: ಮೈಸೂರು

ನಂಜನಗೂಡು: ಎಸ್ ಎಸ್ ಎಲ್ ಸಿ ಪರೀಕ್ಷೆ, ಉಚಿತ ಪ್ರಯಾಣ ಅವಕಾಶವಿದ್ದರೂ ಟಿಕೇಟ್‌ ನೀಡಿದ ಕಂಡಕ್ಟರ್

ನಂಜನಗೂಡು: ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಇಂದು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಸಾರಿಗೆ ಬಸ್ ನಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ಪ್ರಯಾಣ ಮಾಡಲು ಸರ್ಕಾರ ಆದೇಶ ನೀಡಿದೆ.

ಆದರೆ, ಆ ಸರ್ಕಾರದ ಆದೇಶವನ್ನು ಸಾರಿಗೆ ಬಸ್ ಕಂಡಕ್ಟರ್ ಗಾಳಿಗೆ ತೂರಿ ವಿದ್ಯಾರ್ಥಿಗಳಿಬ್ಬರಿಗೆ  ಟಿಕೇಟ್‌ ನೀಡಿರುವ ಘಟನೆ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

ದೊಡ್ಡ ಕವಲಂದೆ ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದ್ದು, ಗಟ್ಟವಾಡಿ ಗ್ರಾಮದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ಮನೋಜ್ ಮತ್ತು ಹೇಮಂತ್ ಇಬ್ಬರು ಬೆಳಿಗ್ಗೆ 9 ಗಂಟೆಗೆ ಗಟ್ಟವಾಡಿಪುರ ಗ್ರಾಮದಿಂದ ಗಟ್ಟವಾಡಿ, ಕವಲಂದೆ ಮಾರ್ಗವಾಗಿ ನಂಜನಗೂಡು ನಗರಕ್ಕೆ ಹೋಗುವ ಕೆಎಸ್ಆರ್ಟಿಸಿ ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡುವಾಗ ಕಂಡಕ್ಟರ್ ಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ತೋರಿಸಿದ್ದಾರೆ. ನಮಗೆ ಉಚಿತವಾಗಿ ಪ್ರಯಾಣವಿದೆ ಎಂದರು ಕ್ಯಾರೇ ಎನ್ನದೆ ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಿದ್ದಾನೆ. ನಮ್ಮಲ್ಲಿ ಹಣವಿರಲಿಲ್ಲ. ನಮ್ಮ ಬಳಿ ಇದ್ದ ಚಿಲ್ಲರೆ ಕಾಸನ್ನು ನೀಡಿ ಟಿಕೆಟ್ ತೆಗೆದುಕೊಂಡು ಪರೀಕ್ಷೆಗೆ ಬಂದಿದ್ದೇವೆ.

ನಮ್ಮ ತಂದೆ ತಾಯಿಗಳು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತೇವೆ ಆದರೆ ಸರ್ಕಾರದ ಆದೇಶವಿದ್ದರೂ ನಮಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸಾಧ್ಯವಿಲ್ಲ. ಕಂಡಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಒತ್ತಾಯ ಮಾಡಿದರು.

Ashika S

Recent Posts

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

2 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

8 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

21 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

22 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

36 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

42 mins ago