ಮೈಸೂರು

ನಂಜನಗೂಡು: ಹಲ್ಲರೆ ಗ್ರಾಪಂ ಪಿಡಿಒ ಲೋಕಾಯುಕ್ತ ಬಲೆಗೆ

ನಂಜನಗೂಡು: ತಾಲ್ಲೂಕಿನ ಹಲ್ಲರೆ ಗ್ರಾಪಂ ಪಿಡಿಒ ವರದರಾಜು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ .

ಖಾಲಿ ನಿವೇಶನದ ಇ – ಸ್ವತ್ತು ಮಾಡಿಕೊಡುವ ಸಂಬಂಧ ಹಲ್ಲರೆ ಗ್ರಾಮದ ಅತಿಕ್ ಉರ್ ರೆಹಮಾನ್ ಎಂಬವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡಲು ನಿರಾಕರಿಸಿದ್ದ ರೆಹಮಾನ್ , ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಅದರಂತೆ ನಂಜನಗೂಡಿನ ಡಿಎಂಜೆ ಕಾಂಪ್ಲೆಕ್ಸ್‌ನಲ್ಲಿ 30 ಸಾವಿರ ರೂ. ಲಂಚ ಸ್ವೀಕರಿಸುವಾಗ ದಾಳಿ ಮಾಡಿರುವ ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ ನೇತೃತ್ವದ ತಂಡ ವರದರಾಜು ಅವರನ್ನು ಬಂಧಿಸಿದೆ.

ಲೋಕಾಯುಕ್ತ ಪಿಐಗಳಾದ ರವಿಕುಮಾರ್, ಲೋಕೇಶ್, ಉಮೇಶ್, ಸಿಎಚ್‌ಸಿಗಳಾದ ರಮೇಶ್, ಜಗದೀಶ್, ಸಿಪಿಸಿಗಳಾದ ಪ್ರಕಾಶ್, ಕಾಂತರಾಜು, ಸಿಬ್ಬಂದಿ ಪುಷ್ಪಲತಾ, ತ್ರಿವೇಣಿ, ಲೋಕೇಶ್, ಮೋಹನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago