News Karnataka Kannada
Sunday, May 05 2024
ಮೈಸೂರು

ನಂಜನಗೂಡು: ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತೊಯ್ದ ಕಳ್ಳರು

Nanjangud: Thieves snatch mangalya chain of sleeping woman
Photo Credit : News Kannada

ನಂಜನಗೂಡು; ಒಂದೇ ರಾತ್ರಿ ಐದು ಕಡೆ ಸರಣಿ ಕಳ್ಳತನವಾಗಿದ್ದು, ಮನೆಯಲ್ಲಿ ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಖದೀಮರು ಕದ್ದೋಯ್ದಿರುವ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಶಿವಕುಮಾರ್ ಎಂಬುವವರ ಪತ್ನಿ ಭವಾನಿ ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು, ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ನಗದು ಹಣ ಹಾಗೂ ಕಾಡಯ್ಯ ಮತ್ತು ರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ನಾಗೇಂದ್ರ ಎಂಬುವರ ಪಂಪ್ ಹೌಸ್ ನಲ್ಲಿ ಬಾಗಿಲುಮುರಿದು ಬೆಳೆಬಾಳುವ ವಸ್ತುಗಳನ್ನು ದೋಚಿದ್ದಾರೆ.

ತಾಲೂಕಿನಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದರೂ , ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಈಗಾದರೆ ಉಳಿದ ಕ್ಷೇತ್ರಗಳ ಗತಿ ಏನು? ಕೂಡಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಕಳ್ಳರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಇನ್ನು ಈ ಸಂಬಂಧ ಹುಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು