ಮೈಸೂರು

ಜ.4ರಂದು ನಂಜನಗೂಡು ಸ್ವಯಂಪ್ರೇರಿತ ಬಂದ್ ಗೆ ಕರೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಆಚರಣೆ ವೇಳೆ ಸಂಪ್ರದಾಯಕ್ಕೆ ಅಡ್ಡಿಪಡಿಸಿ ನಂಜುಂಡೇಶ್ವರನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದಲ್ಲದೆ, ದೇವರ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿ ಭಕ್ತರ ಭಾವನೆಗೆ ಧಕ್ಕೆ ತಂದ ಆರೋಪಿಗಳನ್ನು ಬಂಧಿಸದೆ ಇರುವುದನ್ನು ಖಂಡಿಸಿ ಜ.4ರಂದು ನಂಜನಗೂಡು ಬಂದ್ ಗೆ ಕರೆ ನೀಡಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ನಗರಸಭಾ ಸದಸ್ಯ ಕಪಿಲೇಶ್  ಅವರು, ದಕ್ಷಿಣ ಕಾಶಿ  ನಂಜನಗೂಡಿನ  ನಂಜುಂಡೇಶ್ವರನ ದೇವಾಲಯದಲ್ಲಿ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಮಾರ್ಗಶಿರ  ಹುಣ್ಣಿಮೆಯ ಸಂದರ್ಭದಲ್ಲಿ ಅಂಧಾಕಾಸುರನ ಸಂಹಾರ ನಡೆಸಲಾಗುತ್ತದೆ. ನಂಜುಂಡೇಶ್ವರನ ದೇವಾಲಯದ ಆಚರಣೆಯ ವಿಧಿವಿಧಾನಗಳನ್ನು ಸರ್ಕಾರದ ಅಧಿಕೃತ ಕಟ್ಟಳೆ ಪುಸ್ತಕವನ್ನು ಆಧರಿಸಿ ಅದರ ಸೂಚನೆಯಂತೆ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದಲೇ ಸಂವಿಧಾನದ ಬದ್ಧವಾಗಿ ನಡೆಸುತ್ತಾ ಬರಲಾಗುತ್ತಿದೆ.

ಅದರಂತೆ ಡಿ.26ರಂದು  ಅಂಧಕಾಸುರ ಸಂಹಾರದ ಧಾರ್ಮಿಕ ಆಚರಣೆಯನ್ನು ನಡೆಸಲಾಗಿದ್ದು, ಈ ವೇಳೆ ಕಿಡಿಕೇಡಿಗಳು ಸಂಪ್ರದಾಯಕ್ಕೆ   ಅಡ್ಡಿ ಪಡಿಸಿ, ನಂಜುಂಡೇಶ್ವರನ   ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ಉತ್ಸವ  ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ಘಟನೆ  ನಡೆದು 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4ರ ಗುರುವಾರ ಸ್ವಯಂ ಪ್ರೇರಿತವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಅನಿವಾರ್ಯತೆ ಬಂದಿದೆ ಎಂದರು.

ಅಂದು ಎಲ್ಲರೂ  ನಂಜನಗೂಡು ಪಟ್ಟಣದಲ್ಲಿ  ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್  ಮಾಡಿ ದಕ್ಷಿಣ ಕಾಶಿಯ  ನಂಜುಂಡೇಶ್ವರನಿಗೆ ಎಂಜಲು ಎರಚಿದವರಿಗೆ ಶಿಕ್ಷೆ ಆಗಬೇಕೆಂದು ಒತ್ತಾಯಿಸುವಂತೆ ಮನವಿ ಮಾಡಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago