ಮೈಸೂರು

ನಂಜನಗೂಡು: ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವ ಕೆಲಸ ಮಾಡಬೇಕು

ನಂಜನಗೂಡು: ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಮತಾಂತರ ನಿಷೇಧದಿಂದ ಯಾವುದೇ ಪ್ರಯೋಜನವಿಲ್ಲ. ದಲಿತ, ಹಿಂದುಳಿದ ವರ್ಗದವರನ್ನು ಮುಖ್ಯ ವಾಹಿನಿಗೆ ತರುವುದನ್ನು ಮಠಾಧೀಶರು ಮಾಡಬೇಕು.

ಮತಾಂತರ ಆಗುವುದು ಕೊನೆಯಾಗಬೇಕು. ಆಸೆಗಳಿಗೆ ಒಳಗಾಗಬಾರದು. ಮಠದ ಶ್ರೀಗಳು ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವಂತೆ ಮಾಡಬೇಕೆಂದು ಮನವಿ ಮಾಡಿದರು.

ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶ್ರೀಗಳ ಕೊಡುಗೆ ಅಪಾರವಾಗಿದೆ. ಕಳೆದ ಎಂಟು ವರ್ಷಗಳಲ್ಲಿ ವಿಶ್ರಾಂತಿ ಪಡೆಯದೆ ಪ್ರಧಾನಿ ನರೇಂದ್ರ ಮೋದಿಯವರು ಕೆಲಸ ಮಾಡಿದ್ದಾರೆ. ಅವರೇ ಮುಂದಿನ ಪ್ರಧಾನಿಯಾಗಬೇಕು.

ಮುಖ್ಯಮಂತ್ರಿಯಾಗಿದ್ದಾಗ ನಾನು ಬಜೆಟ್ ನಲ್ಲಿ ಮಠಗಳಿಗೆ ಅನುದಾನ ನೀಡಿದ್ದೆ. ಸುತ್ತೂರು ಶ್ರೀಗಳು ರಾಜ್ಯದ ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿದ್ದಾರೆ. ಮೈಸೂರು ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಬೈರತಿ ಬಸವರಾಜ್, ಪುರುಷೋತ್ತಮನಂದಪುರಿಸ್ವಾಮಿಜೀ, ಕಾಪು ಸಿದ್ದಲಿಂಗಸ್ವಾಮಿ ಭಾಗವಹಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago