News Karnataka Kannada
Monday, April 29 2024
ಮೈಸೂರು

ನಂಜನಗೂಡು: ಕಾಲು ಜಾರಿ ಬಿದ್ದು ಯುವಕ ಸಾವು

ಕಲಬುರಗಿ: 10ನೇ ತರಗತಿಯ ಓರ್ವ ವಿದ್ಯಾರ್ಥಿನಿಯ ಶವ ಬಾಲಕಿಯರ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಹಿನ್ನಲೆ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Photo Credit : News Kannada

ನಂಜನಗೂಡು: ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಇಂದು ಶುಕ್ರವಾರ ಸಂಜೆ 4 ಗಂಟೆಯ ಸಮಯದಲ್ಲಿ ನಡೆದಿದ್ದು, ರಾತ್ರಿ 10: 30 ರ ಸಮಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರಿನ ಅಶೋಕಪುರಂ ನಿವಾಸಿ 24 ವರ್ಷದ ತೇಜಸ್ ಕುಮಾರ್ ಮೃತ ಯುವಕನಾಗಿದ್ದಾನೆ. ಶಿವರಾತ್ರಿ ಹಬ್ಬದ ಸಂಭ್ರಮದಲ್ಲಿದ್ದ ತೇಜಸ್ ಕುಮಾರ್ ರಾಂಪುರ ಗ್ರಾಮದ ಹತ್ವಾಳ್ ಕಟ್ಟೆ ಬಳಿ ಸ್ನೇಹಿತನೊಂದಿಗೆ ಬಂದಿದ್ದಾನೆ. ಈ ವೇಳೆ ಕಟ್ಟೆ ಬಳಿ ನಿಂತುಕೊಂಡಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಸಿಬ್ಬಂದಿಗಳಾದ ದೊಡ್ಡಯ್ಯ, ಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು