Categories: ಮೈಸೂರು

ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ :ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಸ್ವಗ್ರಾಮ. ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ವರದಿಯನ್ನು ಪ್ರಕಟಿಸಿದ ಬಳಿಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಸರ್ಕಾರೇತರ ಇಲಾಖೆಯ ಅಧಿಕಾರಿಗಳು ಸುದ್ದಿ ಮಾಡಿದ ವಿಚಾರವನ್ನು ಬೆನ್ನತ್ತಿದರು.

ಸುದ್ದಿ ವರದಿಯ ಆಧಾರದ ಮೇಲೆ ಹದಿನಾರು ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಹೆಚ್.ಎನ್.ಪ್ರಸನ್ನ ಕುಮಾರ್ ಎಂಬುವರನ್ನು ಇಲಾಖೆ ಅಮಾನತು ಪಡಿಸಿ ಆದೇಶ ಹೊರಡಿಸಿದೆ. ಮಾರ್ಚ್ 19ರಂದು ಇದು ವಸತಿ ಶಾಲೆಯೋ ದನದ ಕೊಟ್ಟಿಗೆಯೋ ಎಂಬ ಶೀರ್ಷಿಕೆಯಲ್ಲಿ ವರದಿಯನ್ನು ಬಿತ್ತರಿಸಲಾಗಿತ್ತು. ಹಾಗೂ ಮಾರ್ಚ್ 21 ರಂದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಮತ್ತು ಪ್ರಾಂಶುಪಾಲರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಹದಿನಾರು ಗ್ರಾಮ ಪಂಚಾಯಿತಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆಯೂ ನ್ಯೂಸ್ ಕರ್ನಾಟಕದಲ್ಲಿ ನಿರಂತರವಾಗಿ ವರದಿ ಪ್ರಸಾರ ಮಾಡಿದ ಪರಿಣಾಮ. ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಗುಣಮಟ್ಟದ ತರಕಾರಿಗಳನ್ನು ಅಡುಗೆಯಲ್ಲಿ ಬಳಸದೆ ಇರುವುದು. ವಿದ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿರುವುದು. ಶುದ್ಧ ನೀರನ್ನು ಪೂರೈಸದೆ ಇರುವುದು.

ಶೌಚಾಲಯಗಳ ಸಮಸ್ಯೆ, ವಸತಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮತ್ತು ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳನ್ನು ಕೇಳಿದರೆ ಅವರನ್ನು ಬೈಯುವುದು ವಿದ್ಯಾರ್ಥಿಗಳ ಕೊಠಡಿಯಲ್ಲಿ ಹಾಸಿಗೆ ದಿಂಬು ಬಟ್ಟೆ ಪುಸ್ತಕಗಳು ಚಿಂದಿ, ಪೇಪರ್ ಗಳು ಚಲ್ಲಾ ಪಿಲ್ಲಿಯಾಗಿ ಬಿದ್ದಿರುವುದು. ಈ ವರದಿಯನ್ನು ಆದರಿಸಿ ಪ್ರಾಂಶುಪಾಲರಾದ ಹೆಚ್.ಎನ್ ಪ್ರಸನ್ನ ಕುಮಾರ್ ಎಂಬುವರನ್ನು ಅಮಾನತು ಮಾಡಿ ಆದೇಶವನ್ನು ನೀಡಲಾಗಿದೆ. ಇದು ನ್ಯೂಸ್ ಕರ್ನಾಟಕ ವರದಿಯ ಫಲಶೃತಿಯಾಗಿದೆ.

Nisarga K

Recent Posts

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

14 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

18 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

34 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

35 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

48 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

1 hour ago