News Karnataka Kannada
Saturday, April 27 2024
ಮೈಸೂರು

ನ್ಯೂಸ್ ಕರ್ನಾಟಕ ವರದಿಯ ಇಂಪ್ಯಾಕ್ಟ್‌ : ವಸತಿ ಶಾಲೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಭೇಟಿ

ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Photo Credit : NewsKarnataka

ನಂಜನಗೂಡು : ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಹದಿನಾರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಗ್ರಾಮ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ರವರ ಸ್ವಗ್ರಾಮದಲ್ಲಿಯೇ ಅಂಬೇಡ್ಕರ್ ವಸತಿ ಶಾಲೆಯ ದುಸ್ಥಿತಿಯಾಗಿರುವುದು ನಾಚಿಸುವಂತಿದೆ.

ವಸತಿ ಶಾಲೆಯೋ? ದನದ ಕೊಟ್ಟಿಗೆಯೋ.? ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತ ವಸತಿ ಶಾಲೆಗಳ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಮಲ್ಲೇಶ್ ಮತ್ತು ಕ್ರೈಸ್ಟ್ ಇಲಾಖೆಯ ಜಿಲ್ಲಾ ಸಂಯೋಜನಾಧಿಕಾರಿ ವೀರಭದ್ರ ಸ್ವಾಮಿ ಭೇಟಿ ನೀಡಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಜೊತೆ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು, ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಪ್ರಸನ್ನಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ವರದಿ ತಯಾರು ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. 150 ಮಕ್ಕಳಿಗೆ ಒಂದು ಶೌಚಾಲಯ, ಮುರಿದ ಬಾಗಿಲು ಕಿಟಕಿಗಳು, ಕುಡಿಯುವ ನೀರಿಗೆ ಬವಣೆ, ಕೊಠಡಿಗಳ ಕೊರತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ವಸತಿ ಶಾಲೆಗೆ ಸರ್ಜರಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಶಾಲೆಗೆ ಬಂದಂತಹ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು