ನಂಜನಗೂಡು: ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡಿನ ಚೆಕ್ ಪೋಸ್ಟ್ ಗಳಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಜಗನ್ನಾಥ್ ಮೂರ್ತಿ ಮತ್ತು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ನೇತೃತ್ವದಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ನಂಜನಗೂಡು ತಾಲ್ಲೂಕಿನ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಎಲಚಗೆರೆ ಗ್ರಾಮದ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡಿದಾಗ ಕಾರಿನಲ್ಲಿ ಬರೋಬರಿ 8. 50ಲಕ್ಷ ಹಣ ಜಪ್ತಿ ಮಾಡಲಾಗಿದೆ.
ತಾಲ್ಲೂಕು ಚುನಾವಣಾ ಅಧಿಕಾರಿ ಜಗನ್ನಾಥ್ ಮೂರ್ತಿ ಹಾಗೂ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ನೇತೃತ್ವದಲ್ಲಿ ಪರಿಶೀಲನೆ ಮಾಡಿದಾಗ ಅನುಮತಿ ಮತ್ತು ದಾಖಲಾತಿ ಇಲ್ಲದೆ ಖಾಸಗಿ ಕಂಪನಿಯ ಹೆಸರಿನಲ್ಲಿ ಹಣ ರವಾನೆ ಮಾಡಲಾಗುತ್ತಿತ್ತು.
ಹಣ ಜಪ್ತಿಯ ವಿಚಾರವನ್ನು ಮುಖ್ಯ ಚುನಾವಣಾ ಅಧಿಕಾರಿ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರ ಗಮನಕ್ಕೆ ತರಲಾಗಿದೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಮತ್ತು ಚುನಾವಣಾ ಸಮಿತಿಯ ಜವಾಬ್ದಾರಿಗೆ ಜಪ್ತಿಯಾದ ಹಣವನ್ನು ರವಾನೆ ಮಾಡಿ ತನಿಖೆ ಮಾಡಲಾಗುತ್ತಿದೆ. ಸ್ಪಷ್ಟ ಮಾಹಿತಿಯನ್ನು ಆಧರಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಚುನಾವಣಾ ಅಧಿಕಾರಿ ಜಗನ್ನಾಥ್ ಮೂರ್ತಿ ತಿಳಿಸಿದರು.