News Karnataka Kannada
Monday, April 22 2024
Cricket
ಮೈಸೂರು

“ದೇಶದಲ್ಲಿ ಮತ್ತೊಮ್ಮೆ ಮೋದಿ” ಗೋಡೆ ಬರಹಕ್ಕೆ ಜಗದೀಶ್ ಶೆಟ್ಟರ್ ಚಾಲನೆ

ಇತ್ತೀಚಿನ ಕೆಲವೇ ತಿಂಗಳುಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರುಗಳ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಗರ್ಭಗುಡಿಯ ಬಳಿ ಕುಳಿತು ಎರಡು ನಿಮಿಷಗಳ ಕಾಲ ನಂಜುಂಡನ ಧ್ಯಾನ ಮಾಡಿದರು.
Photo Credit : News Kannada

ನಂಜನಗೂಡು: ಇತ್ತೀಚಿನ ಕೆಲವೇ ತಿಂಗಳುಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮುಖಂಡರುಗಳ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಗರ್ಭಗುಡಿಯ ಬಳಿ ಕುಳಿತು ಎರಡು ನಿಮಿಷಗಳ ಕಾಲ ನಂಜುಂಡನ ಧ್ಯಾನ ಮಾಡಿದರು.

ನಂತರ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿ ನಮ್ಮ ತವರು ಮನೆ ಮತ್ತೆ ಮರಳಿದ್ದೇನೆ ಬಿಜೆಪಿಯ ರಾಜ್ಯ ಮುಖಂಡರು ಕೇಂದ್ರ ಮುಖಂಡರು ಮತ್ತು ಸ್ಥಳೀಯ ಕಾರ್ಯಕರ್ತರಿಂದ ಉತ್ತಮವಾದ ಪ್ರತಿಕ್ರಿಯೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಮ್ಮ ಪರಿಶ್ರಮವು ಕೂಡ ಉತ್ತಮವಾಗಿತ್ತು. ನಮ್ಮ ಕೆಲ ವೈಯಕ್ತಿಕ ವಿಚಾರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರಿದೆ ಅಲ್ಲಿಯೂ ಕೂಡ ನನಗೆ ಯಾವುದೇ ರೀತಿಯ ತೊಂದರೆ ಇರಲಿಲ್ಲ ಕೇಂದ್ರದ ಬಿಜೆಪಿ ಮುಖಂಡರು ನನ್ನನ್ನು ಪ್ರಬಲವಾಗಿ ಬಿಜೆಪಿಗೆ ಕರೆ ತರಲು ಮನವೊಲಿಸಿದರು. ನಾನು ಕೂಡ ಉತ್ತಮವಾದ ನಿರ್ಣಯ ತೆಗೆದುಕೊಂಡು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗುವುದರಲ್ಲಿ ಅನುಮಾನವೇ ಇಲ್ಲ. ರಾಜ್ಯದಲ್ಲಿ ಸಾಕಷ್ಟು ಖಾಸಗಿ ಸರ್ವೆ ಮಾಡಿಸಲಾಗಿದೆ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭರವಸೆ ಇದೆ. ಕೇಂದ್ರದ ವರಿಷ್ಠರು ಸೂಚನೆ ನೀಡಿದರೆ ನಾನು ಪಾರ್ಲಿಮೆಂಟ್ ಎಲೆಕ್ಷನ್ ಗೆ ಸ್ಪರ್ಧೆ ಮಾಡುತ್ತೇನೆ ಎಂದರು.

ನಂತರ ನಂಜನಗೂಡು ಪಟ್ಟಣದ ಮೇದರ ಗೆರೆಯ ಗೋಡೆ ಬರಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಬಿಜೆಪಿ ಪಕ್ಷದ ಬ್ಲಾಕ್ ಅಧ್ಯಕ್ಷರಾದ ಹೊರಳವಾಡಿ ಮಹೇಶ್, ಶ್ರೀನಿವಾಸ್ ರೆಡ್ಡಿ, ಮರಳೂರು ಮಹೇಶ್ ಕುಮಾರ್ ಉಮೇಶ್ ಮೋದಿ ಸೇರಿದಂತೆ ಸಾಕಷ್ಟು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು