Categories: ಮೈಸೂರು

ಮತ ಚಲಾಯಿಸಿದವರಿಗೆ ಮಾತ್ರ ಅರಮನೆ ಪ್ರವೇಶ

ಮೈಸೂರು: ಮೈಸೂರಿನ ಪ್ರವಾಸಿ ತಾಣಗಳನ್ನು ಏಪ್ರಿಲ್ 26 ರಂದು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಆ ಮೂಲಕ ಮತದಾನದ ಮೂಲಕ ಮತಚಲಾಯಿಸದೆ ಟ್ರಿಪ್ ಹೋಗುವವರಿಗೆ ಶಾಕ್ ನೀಡಲಾಗಿದೆ.

ಮತ್ತೊಂದೆಡೆ 14 ಕ್ಷೇತ್ರಗಳ ಪ್ರವಾಸಿಗರ ಪೈಕಿ ಮತಚಲಾಯಿಸಿದವರಿಗೆ ಮಾತ್ರ ಮೈಸೂರು ಅರಮನೆಗೆ ಪ್ರವೇಶ ನೀಡಲು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತೀರ್ಮಾನ ಮಾಡಿದ್ದಾರೆ.

ಈ ಬಾರಿ ಮತದಾನ ದಿನ ಸೇರಿದಂತೆ ಮೂರು ದಿನ ರಜೆಯಿರುವ ಕಾರಣದಿಂದ ಕೆಲವರು ಮತದಾನ ಮಾಡದೆ ಟ್ರಿಪ್ ಹೋಗುವ ಸಾಧ್ಯತೆ ಇದೆ. ಇದನ್ನು ತಪ್ಪಿಸಿ ಎಲ್ಲರೂ ಮತದಾನ ಮಾಡುವಂತೆ ಮಾಡುವ ಕಾರ್ಯವನ್ನು ಚುನಾವಣಾ ಆಯೋಗ ಮಾಡುತ್ತಿದೆ. ಒಂದು ವೇಳೆ ಜನ ಪ್ರವಾಸ ತೆರಳಿದರೆ ಮತದಾನದ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಹೆಚ್ಚಾಗಿದೆ. ಇದನ್ನು ತಡೆಯುವುದು ಅನಿವಾರ್ಯವಾಗಿದೆ.

ಮತದಾನದ ದಿನ ಶುಕ್ರವಾರವಾಗಿದ್ದರಿಂದ ಅಂದು ರಜೆ ಇದೆ.  ಜತೆಗೆ ವಾರಾಂತ್ಯದ ಶನಿವಾರ, ಭಾನುವಾರವೂ ರಜೆಯಾದ್ದರಿಂದ ಮತದಾರರು ಪ್ರವಾಸಕ್ಕೆ ಯೋಜನೆ ಹಾಕಿಕೊಂಡು ತೆರಳಿದರೆ ಮತದಾನದ ಮೇಲೆ ಪರಿಣಾಮ ಬೀರಲಿದೆ. ಸದ್ಯ ಮೈಸೂರಿನಲ್ಲಿ ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

15 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

30 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

52 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago