News Karnataka Kannada
Tuesday, April 30 2024
ಮೈಸೂರು

ಪಿರಿಯಾಪಟ್ಟಣ: ಅರಣ್ಯ ಸಿಬ್ಬಂದಿಗೆ ಸೌಲಭ್ಯ ಸಮರ್ಪಕವಾಗಿ ತಲುಪಬೇಕು- ಕೆ.ಮಹದೇವ್

Periyapatna: Facilities should reach forest staff properly: K Mahadev
Photo Credit : By Author

ಪಿರಿಯಾಪಟ್ಟಣ: ಅರಣ್ಯ ವೀಕ್ಷಕರು ಹಾಗೂ ಮಾವುತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಆಗ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ‍್ಯವಾಗುತ್ತದೆ ಎಂದು ಶಾಸಕ ಕೆ.ಮಹದೇವ್ ಅಭಿಪ್ರಾಯಪಟ್ಟರು.

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಬರುವ ಹುಣಸೂರು ವನ್ಯಜೀವಿ ವಿಭಾಗದ ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆಯಲ್ಲಿ ತೆರೆಯಲಾಗಿರುವ ನೂತನ ಆನೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ ಕಾಡಂಚಿನ ಗ್ರಾಮದ ನಿವಾಸಿಗಳಿಗೆ ಕಾಡುಪ್ರಾಣಿ ಹಾವಳಿಯಿಂದ ಆಗುತ್ತಿರುವ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ ಅಧಿಕಾರಿಗಳು ಕಾಮಗಾರಿ ಅನುಷ್ಠಾನಕ್ಕಾಗಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.

ಮಡಿಕೇರಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎನ್ ಮೂರ್ತಿ ಅವರು ಮಾತನಾಡಿ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತೂರು ಬಳಿ ಸಫಾರಿ ಕೇಂದ್ರವನ್ನು ನವೆಂಬರ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಹುಣಸೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ, ಹುಣಸೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್ ದಯಾನಂದ್, ನಾಗರಹೊಳೆ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಹುಣಸೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಎಂ.ಎ ರತನ್ ಕುಮಾರ್, ಆನೆಚೌಕೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಗಣರಾಜ್ ಪಟೇಗಾರ್, ಉಪವಲಯ ಅರಣ್ಯಾಧಿಕಾರಿ ಸಿದ್ದರಾಜು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡರಾದ ಗಗನ್, ಕಾಳೇಗೌಡ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು