Categories: ಮೈಸೂರು

ಪಿರಿಯಾಪಟ್ಟಣ: ಸೋಲಾರ್ ಬೇಲಿ ಅಳವಡಿಕೆ ಮಾಡದಂತೆ ಮನವಿ

ಪಿರಿಯಾಪಟ್ಟಣ: ಗಿರಿ ಜನರಿಗೆ ಸಾಮೂಹಿಕ ಹಕ್ಕು ಪತ್ರ ನೀಡಿರುವ ಜಾಗವನ್ನು ಒಳಗೊಂಡಂತೆ ತಾಲ್ಲೂಕಿನ ಕೊಪ್ಪ ಗ್ರಾಪಂ ವ್ಯಾಪ್ತಿಗೆ ಸೇರಿದ ಲಿಂಗಪುರ, ರಾಣಿ ಗೇಟ್ 16 ಎಕರೆ. (ಗೌಡನಕಟ್ಟೆ) ಸೇರಿದಂತೆ ಹಲವು ಗಿರಿಜನ ಹಾಡಿಗಳ ಅಕ್ಕ ಪಕ್ಕ ಅರಣ್ಯ ಇಲಾಖೆ ವತಿಯಿಂದ ಸೋಲಾರ್ ಬೇಲಿ ಅಳವಡಿಸಲಾಗುತ್ತಿದ್ದು ಇದನ್ನು ನಿಲ್ಲಿಸುವಂತೆ ಕರ್ನಾಟಕ ದಲಿತ ಚಳುವಳಿ ನವ ನಿರ್ಮಾಣ ವೇದಿಕೆ ಮನವಿ ಮಾಡಿದೆ.

ಈ ಕುರಿತಂತೆ ಕರ್ನಾಟಕ ದಲಿತ ಚಳುವಳಿ ನವ ನಿರ್ಮಾಣ ವೇದಿಕೆ ಮುಖಂಡ ಟಿ ಈರಯ್ಯ, ಸೀಗೂರು ವಿಜಯ್ ಕುಮಾರ್, ಎಚ್ ಡಿ ರಮೇಶ್ ಮಾತನಾಡಿ ಈ ಹಿಂದೆ ಬುಡಕಟ್ಟು ಹಕ್ಕುಗಳ ಮಾನ್ಯತೆ ಕಾಯ್ದೆ 2006 ರ ಅಡಿಯಲ್ಲಿ ಅಧಿನಿಯಮ 3(1)(ಐ) ರಂತೆ ಸಮುದಾಯ ಹಕ್ಕು ಪತ್ರಗಳನ್ನು ಅರಣ್ಯ ಹಕ್ಕು ಸಮಿತಿ ವತಿಯಿಂದ ನೀಡಲಾಗಿದೆ. ಆದರೂ ಹಾಡಿಯ ಗಿರಿಜನರು ಯಾವುದೇ ದೇವಾಲಯಕ್ಕೆ ಮತ್ತು ಶವಸಂಸ್ಕಾರಕ್ಕೆ (ಸ್ಮಶಾನಕ್ಕೆ) ಹೋಗದಂತೆ ಕೆಲವು ಗಿರಿ ಜನರ ಜಾಗಗಳನ್ನು ಒಳಗೊಂಡಂತೆ ಸೋಲಾರ್ ಬೇಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಳವಡಿಸುತ್ತಿರುವ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಗಿರಿಜನ ಹಾಡಿಯ ಮುಖಂಡರು ಹುಣಸೂರು ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ರವರಿಗೆ ಮತ್ತು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ ಆದರೂ ಅದನ್ನು ಲೆಕ್ಕಿಸದೆ ನಾಗರಹೊಳೆ ಹುಲಿ ಸೂಕ್ಷ್ಮ ಅರಣ್ಯ ಪ್ರದೇಶ ದೊಡ್ಡ ಹರವೆ ಭಾಗದಲ್ಲಿ ಅಧಿಕಾರಿಗಳು ಕೆಲಸವನ್ನು ಮುಂದುವರಿಸಿದ್ದಾರೆ ಎಂದು ದೂರಿದ್ದು, ಅರಣ್ಯ ಇಲಾಖೆಯು ಸೋಲಾರ್ ಬೇಲಿಯನ್ನು ಅಳವಡಿಸುವ ಮುಂಚಿತವಾಗಿ ಗ್ರಾಮ ಅರಣ್ಯ ಸಮಿತಿಯ ಸಭೆಯನ್ನು ನಡೆಸಿ ಚರ್ಚಿಸುವ ಮೂಲಕ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಲು ನಿರ್ಧಾರ ಮಾಡಬೇಕಿತ್ತು. ಆದರೆ ಯಾವುದೇ ಸಭೆ ನಡೆಸದೆ ಜನರಿಗೆ ಮನವರಿಕೆ ಮಾಡದೆ ಏಕಾಏಕಿಯಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿರುವ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

12 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

26 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

50 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago