Categories: ಮೈಸೂರು

ಜಿಂಕೆಯ ಕೊಂಬಿಗೆ ಮೀನಿನ ಬಲೆ ಸಿಲುಕಿ ಮೂಕಪ್ರಾಣಿಯ ನರಳಾಟ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆಯ ಕೊಂಬಿಗೆ ಮೀನು ಹಿಡಿಯುವ ಬಲೆ ಸಿಲುಕಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ.
ಈ ಅಕ್ರಮದ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ವನ್ಯಜೀವಿ ಕಾರ್ಯಕರ್ತರು  ಒತ್ತಾಯಿಸಿದ್ದಾರೆ. ಮೀನುಬಲೆ ಸಿಲುಕಿ ನರಳುತ್ತಿರುವ ಜಿಂಕೆಯನ್ನು ಪತ್ತೆ ಮಾಡಿ ಅದರ ಕೊಂಬಿಗೆ ಸಿಲುಕಿರುವ ಮೀನುಗಾರಿಕೆ ಬಲೆ ತೆಗೆಯುವಂತೆ ಒತ್ತಾಯಿಸಿದ್ದಾರೆ.  ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಾಕನಕೋಟೆ ಪ್ರದೇಶದಲ್ಲಿ ಜಂಗಲ್ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಮೀನಿನ ಬಲೆ ಸಿಲುಕಿ ಜಿಂಕೆ ಪರದಾಡುತ್ತಿರುವುದನ್ನು ಗಮನಿಸಿ ಫೋಟೋ ಕ್ಲಿಕ್ಕಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನ ಸಮೀಪದಲ್ಲಿರುವ ಕುಪ್ಪೆ ಅರಣ್ಯದಲ್ಲಿ
ಈ ಜಿಂಕೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಮೀನುಗಾರಿಕೆ ಬಲೆಗಳಿಂದ ತೊಂದರೆ: ಬಂಡೀಪುರ ಮತ್ತು ನಾಗರಹೊಳೆ ಅರಣ್ಯದ ಸಮೀಪ ವಾಸಿಸುವ ಮೀನುಗಾರರು ಹೆಚ್ಚಾಗಿ ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಬಲೆಗಳನ್ನು ಬೀಸುತ್ತಾರೆ.
ಕೆಲವೊಮ್ಮೆ, ಆ ಮೀನುಗಾರಿಕೆ ಬಲೆಗಳು ನೀರಿನಲ್ಲಿ ಉಳಿಯುತ್ತವೆ ಮತ್ತು ಅವುಗಳ ದಡ ಸೇರಿ ಕಾಡುಪ್ರಾಣಿಗಳಿಗೆ ಕಂಟಕವಾಗುತ್ತದೆ. ವನ್ಯಜೀವಿಗಳು ನೀರು ಕುಡಿಯುವುದಕ್ಕೆ ತೆರಳಿದ ವೇಳೆ ಪ್ರಾಣಿಗಳ  ಕಾಲು, ಕುತ್ತಿಗೆ ಮತ್ತು ಕೊಂಬುಗಳಿಗೆ ಬಲೆ ಸಿಲುಕಿ ಪ್ರಾಣಕ್ಕೆ ಎರವಾಗುತ್ತದೆ. ಕೆಲವೊಮ್ಮೆ ಆನೆಗಳು ಕೂಡ ಈ ಮೀನುಗಾರಿಕೆ ಬಲೆಗಳನ್ನು ಬಿಡಿಸಿಕೊಳ್ಳಲು ಹರಸಾಹಸ ಪಡುತ್ತವೆ. 2021 ರಲ್ಲಿ, ಅರಣ್ಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೀನುಗಾರಿಕೆ ಬಲೆಯಲ್ಲಿ ಸಿಲುಕಿ ನೀರಿನಿಂದ ಹೊರಬರಲು ಸಾಧ್ಯವಾಗದ ಚಡಪಡಿಸುತ್ತಿದ್ದ ಆನೆಯನ್ನು ರಕ್ಷಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ ಚಿಕ್ಕನರಗುಂದ ತಿಳಿಸಿದ್ದಾರೆ.
Umesha HS

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

6 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

13 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

30 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

57 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago