ಮೈಸೂರು

ಮೈಸೂರು ಬಳಿ ಮೋದಿ ಸಹೋದರನ ಕಾರು ಅಪಘಾತ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ಮೈಸೂರು ಹೊರವಲಯದ ಕಡಕೊಳ ಬಳಿ ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ ಮತ್ತು ಅವರ ಕುಟುಂಬ ಎರಡು ಕಾರುಗಳಲ್ಲಿ ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ಬಂಡೀಪುರಕ್ಕೆ ತೆರಳುವ ಸಂದರ್ಭ ಪ್ರಹ್ಲಾದ್ ದಾಮೋದರ ಮೋದಿ ಅವರಿದ್ದ ಕಾರಿನ ಚಾಲಕ ಸತ್ಯನಾರಾಯಣ(46)ನ ನಿಯಂತ್ರಣ ತಪ್ಪಿ ಮಂಗಳವಾರ 1.40ರ ಸಮಯದಲ್ಲಿ ಮೈಸೂರು ತಾಲೂಕಿನ ಕಡಕೊಳದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನ ಮುಂಭಾಗ ಜಖಂಗೊಂಡಿದೆ.

ಅಪಘಾತವಾದ ಕಾರಿನಲ್ಲಿ ಚಾಲಕ ಸೇರಿದಂತೆ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ (70), ಅವರ ಮಗ ಮೆಹುಲ್ ಮೋದಿ(40), ಸೊಸೆ ಜಿನಾಲ್ ಮೋದಿ (35) ಹಾಗೂ ಮೊಮ್ಮಗ ಮೆಹತ್ ಮೆಹೊಲ್ ಮೋದಿ (6) ಇದ್ದರು. ಪ್ರಹ್ಲಾದ್ ಅವರ ಮಗನ ಗದ್ದಕ್ಕೆ, ಸೊಸೆಗೆ ತಲೆಗೆ, ಮೊಮ್ಮಗ ಮೆಹತ್‌ಗೆ ಕಾಲು ಪೆಟ್ಟಾಗಿದೆ. ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ಪ್ರಹ್ಲಾದ್ ದಾಮೋದರ ಮೋದಿ ಅವರ ಪುತ್ರಿ ಮತ್ತು ಅಳಿಯ ಅವರು ಎಲ್ಲಾ ಗಾಯಾಳುಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಮೈಸೂರು ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಸ್ಥಳಕ್ಕೆ ಜಿ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಜೆಎಸ್‌ಎಸ್ ಆಸ್ಪತ್ರೆ ವೈದ್ಯ ಡಾ.ಮಧು ಮಾತನಾಡಿ ಪ್ರಧಾನಿ ಮೋದಿ ಅವರ ಸಹೋದರ ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೊಮ್ಮಗನ ಕಾಲಿಗೆ ಪೆಟ್ಟಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಕೆ.ಗೋಪಾಲಯ್ಯ, ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಸಹೋದರ ಪ್ರಹ್ಲಾದ್ ಮೋದಿ ಕುಟುಂಬದ ಆರೋಗ್ಯ ವಿಚಾರಿಸಿದರು.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

12 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

37 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago