News Karnataka Kannada
Sunday, May 05 2024
ಮೈಸೂರು

ಮೈಸೂರಿನಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ

PM Modi's roadshow in Mysuru on Sunday
Photo Credit : By Author

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಏ.30 ರಂದು ಬೃಹತ್ ಚುನಾವಣಾ ಪ್ರಚಾರ ರ‍್ಯಾಲಿಯನ್ನು ನಡೆಸಲಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ದೆಹಲಿಯಿಂದ ನೇರವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಲಿರುವ ನರೇಂದ್ರ ಮೋದಿಯವರು ಅವರನ್ನು ಮೈಸೂರಿನ ಪಾರಂಪರಿಕ ವಸ್ತುಗಳಾದ ವೀಳ್ಯದೆಲೆ, ಶ್ರೀಗಂಧದ ಕಡ್ಡಿ, ಮೈಸೂರು ಸಿಲ್ಕ್ ಬಟ್ಟೆ ಮುಂತಾದವುಗಳನ್ನು ನೀಡಿ ಸ್ವಾಗತಿಸಲಾಗುವುದು.

ನಾದಸ್ವರ ಸೇರಿದಂತೆ ಜಾನಪದ ಕಲಾತಂಡಗಳು, ಪೂರ್ಣ ಕುಂಭ ಹೊತ್ತ ಮಹಿಳೆಯರು ಭರ್ಜರಿ ಸ್ವಾಗತ ನೀಡಲಿದ್ದಾರೆ. ಬಳಿಕ ಮೋದಿಯವರು ಮುಡಾ, ರಾಮಸ್ವಾಮಿ ಸರ್ಕಲ್, ಚಾಮರಾಜ ನೂರಡಿ ರಸ್ತೆ ಮೂಲಕ ಗನ್‌ಹೌಸ್‌ಗೆ ಆಗಮಿಸಲಿದ್ದಾರೆ. ಸಂಜೆ 5.30ಕ್ಕೆ ತೆರೆದ ವಾಹನದಲ್ಲಿ ರೋಡ್ ಶೋ ರಾಲಿ ಪ್ರಾರಂಭಿಸಲಿದ್ದಾರೆ. ಅವರನ್ನು ಸುಮಾರು 30ಕ್ಕೂ ಹೆಚ್ಚು ಕಲಾತಂಡಗಳು, ಮೈಸೂರಿನ ಪಾರಂಪರಿಕ ವೇಷಭೂಷಗಳನ್ನು ಧರಿಸಿದ 30ಸಾವಿರಕ್ಕೂ ಹೆಚ್ಚು ಜನರು ದಾರಿಯ ಉದ್ದಕ್ಕೂ ಸ್ವಾಗತಿಸಲಿದ್ದಾರೆ ಎಂದರು.

ರಾಲಿ ಸಂಸ್ಕೃತ ಪಾಠಶಾಲೆ, ನಗರಪಾಲಿಕೆ, ಸಿಟಿ ಬಸ್ ನಿಲ್ದಾಣ, ಕೆ.ಆರ್.ಸರ್ಕಲ್ ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್‌ಎಂಸಿ ಮೂಲಕ ಸಾಗಿ ಮಿಲಿಯನ್ ಸರ್ಕಲ್‌ವರೆಗೆ ಸಾಗಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಈ ರಾಲಿಯಲ್ಲಿ ಭಾಗವಹಿಸಲಿದ್ದಾರೆ. ಮೋದಿಯವರು ಹಾದುಹೋಗುವ ರಸ್ತೆ ಇಕ್ಕಲೆಗಳಲ್ಲಿ ಪಾರಂಪರಿಕ ಉಡುಗೆ ತೊಟ್ಟ ಜನರು ಸ್ವಾಗತಿಸಲಿದ್ದಾರೆ ಎಂದರು.

ಸುಮಾರು ನಾಲ್ಕು ಕಿಲೋಮೀಟರ್ ರ್‍ಯಾಲಿ ನಡೆಸಲಿರುವ ಮೋದಿಯವರು, ಮಿಲಿಯಮ್ ಸರ್ಕಲ್‌ ನಲ್ಲಿ ರ‍್ಯಾಲಿ ಮುಕ್ತಾಯಗೊಳಿಸಿ ಅಲ್ಲಿಂದ ನೇರವಾಗಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ದೆಹಲಿಗೆ ತೆರಳಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಸ್ತೆ ಇಕ್ಕೆಲಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಡೆದು ಬಂದ ಹಾದಿ, ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ನೀಡಿದ ಕೊಡುಗೆಗಳು, ಲಾಲ್ ಚೌಕ್‌ನಲ್ಲಿ ಬಾಲಕನಾಗಿದ್ದಾಗ ರಾಷ್ಟ್ರ ಧ್ವಜ ಹಾರಿಸಿದ ಚಿತ್ರದಿಂದ ಹಿಡಿದು, ಜಿ.20 ವಿಶ್ವದ ನಾಯಕನಾಗಿ ಬೆಳೆದ ಬಗೆ, ಮಾಡಿದ ಸಾಧನೆಗಳು ಮುಂತಾದವುಗಳ ಭಿತ್ತಿ ಚಿತ್ರಗಳನ್ನು ಹಾಕಲಾಗುವುದು.

ಮೋದಿಯವರು ಹೊಂದಿರುವ ದೂರ ದೃಷ್ಟಿ ಕಲ್ಪನೆ ಮತ್ತು ಸಾಕಾರಗಳನ್ನು ತೋರಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹಿರಿಯ ನಾಗರಿಕರು ನೋಡಲು ಅನುಕೂಲವಾಗುವಂತೆ ಐದು ಸ್ಥಳಗಳಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿಗುವುದಾಗಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು