ಮೈಸೂರು

ಪ್ರತಾಪಸಿಂಹ ಭಯೋತ್ಪಾದಕ ಹೇಳಿಕೆ ಕಾಂಗ್ರೆಸ್ ನದಲ್ಲ: ಲಕ್ಷ್ಮಣ್

ಮೈಸೂರು: ಪ್ರತಾಪಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲ. ಪ್ರತಾಪಸಿಂಹ ಮೈಸೂರಿನ ಗೌರವಾನ್ವಿತ ಸಂಸದರಾಗಿದ್ದು, ಉಗ್ರ ವೇಷದ ಭಾವಚಿತ್ರ ಪ್ರದರ್ಶನಕ್ಕೂ-ಕಾಂಗ್ರೆಸ್‌ಗೂ ಸಂಬಂಧವಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಾಪಸಿಂಹ ಅವರನ್ನು ಬುರ್ಖಾ ಹಾಕಿ, ಕೈಯಲ್ಲಿ ಬಾಂಬ್ ಕೊಟ್ಟು ದೇಶದ್ರೋಹಿ, ಭಯೋತ್ಪಾದಕ ಎಂದೆ ಬರೆಯಲಾಗಿತ್ತು. ಈ ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿರೋಧಿ ಎಂದೇ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಎಂದೂ ಮುಸ್ಲಿಂ ವಿರೋಧಿಯಲ್ಲ. ಇದೇ ವಿಚಾರವಾಗಿ ಒಕ್ಕಲಿಗರ ಸಂಘದ ನಿರ್ದೇಶಕರು ಕಾಂಗ್ರೆಸ್ ಟೀಕಿಸುತ್ತಿದ್ದಾರೆ. ಪ್ರತಿಭಟನೆ ನಡೆಸಿದ ವೇದಿಕೆಯ ಕೆ.ಎಸ್.ಶಿವರಾಮ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆ ಹಿಂದೆ, ಮುಂದೆ ನಿಂತಿರುತ್ತಾರೆ. ಅವರು ಕಾಂಗ್ರೆಸ್ ಪಕ್ಷದ ಸದಸ್ಯರೂ ಅಲ್ಲ. ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದರು.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ವಿಚಾರದಲ್ಲಿ ಸಂಸದ ಪ್ರತಾಪಸಿಂಹ ರಾಜಕಾರಣ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಂಸದ ಪ್ರತಾಪಸಿಂಹ ಪತ್ರ ಬರೆದು ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದಾರೆ. ನಾಲ್ವಡಿ ಹೆಸರು ನಾಮಕರಣಕ್ಕೆ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಮೂಲಕ ಕೇಂದ್ರಕ್ಕೆ ಪತ್ರ ಬರೆಸಿರುವುದಾಗಿ ತಿಳಿಸಿದ್ದಾರೆ. ಆದರೆ, ಸಿದ್ದರಾಮಯ್ಯ 2015ರಲ್ಲಿಯೇ ನಾಲ್ವಡಿ ಹೆಸರು ನಾಮಕರಣ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಅದೇ ಪತ್ರವನ್ನು ಇನ್ನೊಮ್ಮೆ ಕಳುಹಿಸುವುದಾಗಿ ಹೇಳಿದ್ದಾರೆ. ಆದರೆ, 10 ವರ್ಷಗಳಿಂದ ಸಂಸದರಾಗಿರುವ ಪ್ರತಾಪಸಿಂಹ ಸುಮ್ಮನಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹುಬ್ಬಳ್ಳಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವಂತೆ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೇ, ಅವರಿಗೂ ಮತ್ತು ಮೈಸೂರಿಗೂ ಸಂಬಂಧ ಇಲ್ಲ ಎಂದು ಇದೇ ಸಂದರ್ಭ ತಿಳಿಸಿದರು.

Gayathri SG

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

9 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

58 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago