Categories: ಮೈಸೂರು

ವಿಶ್ವದ ಶಾಂತಿ, ಒಳಿತಿಗಾಗಿ ಪ್ರಾರ್ಥನೆ: ಮೈಸೂರು ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಡಾ.ಕೆ.ಎ.ವಿಲಿಯಂ

ಮೈಸೂರು: ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷ ಕ್ರಿಸ್‌ಮಸ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿಶ್ವದ ಶಾಂತಿ, ಒಳಿತಿಗಾಗಿ ಪ್ರಾರ್ಥಿಸಲಾಗುವುದು ಎಂದು ಮೈಸೂರು ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಡಾ.ಕೆ.ಎ.ವಿಲಿಯಂ ತಿಳಿಸಿದರು.

ಬನ್ನಿಮಂಟಪದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರಿಸ್ಮಸ್ ಕ್ರಿಶ್ಚಿಯನ್ನರ ಪ್ರಮುಖ ಹಬ್ಬವಾಗಿದ್ದು, ಕೊರೊನಾ ಹಾವಳಿಯಿಂದ ಕಳೆದ ಎರಡು ವರ್ಷಗಳಿಂದ ಯಾವುದೇ ಹಬ್ಬಗಳು ಸಂಭ್ರಮದದಿಂದ ನಡೆಯಲು ಸಾಧ್ಯವಾಗಲಿಲ್ಲ. ಈಗ ಮತ್ತೆ ಕೊರೊನಾ ಪ್ರಪಂಚವನ್ನು ಆವರಿಸುತ್ತಿರುವ ಸುದ್ದಿಗಳು ಕೇಳಿಬರುತ್ತಿರುವುದರಿಂದ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿಗದಿಪಡಿಸಿರುವ ಕೋವಿಡ್ ನಿಯಮಗಳಂತೆ ಕ್ರಿಸ್ಮಸ್ ಹಬ್ಬ ಆಚರಣೆ ಮಾಡಲಾಗುತ್ತದೆ. ಸುಖಃ ಶಾಂತಿ, ನೆಮ್ಮದಿಗಾಗಿ ಪ್ರಾರ್ಥಿಸಲಾಗುತ್ತದೆ ಎಂದು ಹೇಳಿದರು.
ಕ್ರಿಸ್ಮಸ್ ಹಬ್ಬದಂದು ಸಾವಿರಾರು ಸಂಖ್ಯೆಯಲ್ಲಿ ಜನರು ಚರ್ಚ್‌ಗೆ ಭೇಟಿ ನೀಡಿ, ಯೇಸುಕ್ರಿಸ್ತನಿಗೆ ಪ್ರಾರ್ಥನೆ ಸಲ್ಲಿಸುವ ವಾಡಿಕೆಯಿರುವುದರಿಂದ ಚರ್ಚ್‌ಗೆ ಆಗಮಿಸುವ ಎಲ್ಲರೂ ಮಾಸ್ಕ್ ಧರಿಸಿ ಕೊರೊನಾ ನಿಯಮಗಳನ್ನು ಅನುಸರಿಸಿಕೊಂಡು ಹಬ್ಬವನ್ನು ಆಚರಿಸಬೇಕು ಎಂದು ತಿಳಿಸಿದರು.

ಇಂದು ಸಮಾಜ ಎಷ್ಟೇ ಬದಲಾದರೂ ಶಾಂತಿ, ನೆಮ್ಮದಿ ಇಲ್ಲದಾಗಿದೆ. ಮನೋವಿಕಾಸ ಕಡಿಮೆಯಾಗುತ್ತಿದೆ. ಸೌಹಾರ್ದತೆ, ಹಂಚಿಕೊಳ್ಳುವ, ಪರಸ್ಪರ ಗೌರವ ನೀಡುವ ಮನೋಭಾವ ಇಲ್ಲವಾಗಿದೆ. ಹೃದಯ ಕಲ್ಲಾಗುತ್ತಿದೆ. ಹೀಗಾಗಿ ಶಾಂತಿ, ನೆಮ್ಮದಿಗಾಗಿ, ಸೌಹಾರ್ದತೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು. ಯೇಸುಕ್ರಿಸ್ತರು ಜಗತ್ತಿನ ಸೌರ್ಹಾದತೆಗಾಗಿ ದುಡಿದವರು. ಜಗತ್ತಿನ ಒಳಿತಿಗಾಗಿ ಚಿಂತಿಸಿದವರು. ಆದ್ದರಿಂದ, ಎಲ್ಲರೂ ಅಸೂಯೆ ಬದಿಗಿಟ್ಟು ಪರಸ್ಪರ ಅನ್ಯೋನ್ಯತೆಯಿಂದ ಬದುಕುವುದು ಇಂದು ಅತ್ಯಗತ್ಯ. ನಮ್ಮ ದೇಶದಲ್ಲಿ ವಿವಿಧ ಧರ್ಮ, ಜಾತಿಯ ಜನರಿರುವುದರಿಂದ, ಆಚರಣೆಯೂ ವಿಭಿನ್ನವಾಗಿದೆ. ನಮ್ಮ ಆಚರಣೆ, ಸಂಪ್ರಾದಯಗಳು ಬೇರೆ ಇದ್ದರೂ ಶಾಂತಿಯುತ ಸಹಬಾಳ್ವೆ ನಡೆಸುವುದು ಬಹಳ ಮುಖ್ಯ. ಕ್ರಿಸ್ಮಸ್ ಹಬ್ಬದ ಉದ್ದೇಶವೂ ಇದೆ ಎಂದು ಹಬ್ಬದ ಪ್ರಯುಕ್ತ ಶುಭಾಶಯ ಕೋರಿದರು.

ಮೈಸೂರು ಧರ್ಮ ಕ್ಷೇತ್ರದ ಧರ್ಮ ಗುರುಗಳಾದ ಆಲೆಡ್ ಜಾನ್ವಿಂಟೋ, ವಿಜಯಕುಮಾರ್, ಜೋಸೆಫ್ ಭಾಗ್ಯರಾಜ, ಜೇಮ್ಸ ಡೊಮಿನಿಕ್ ವಾಸ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Sneha Gowda

Recent Posts

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

8 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

22 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

32 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago