News Karnataka Kannada
Tuesday, May 07 2024
ಮೈಸೂರು

ಮೈಸೂರಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾವರಣೆಗೆ ಸಿದ್ಧತೆ

Preparations for meaningful Independence Day celebrations in Mysore
Photo Credit : By Author

ಮೈಸೂರು: ಕಳೆದ ಎರಡು ವರ್ಷಗಳು ಕರೋನಾ ಹಿನ್ನೆಲೆಯಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿತ್ತಾದರೂ ಈ ಬಾರಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಡಳಿತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರತಿ ವರ್ಷದಂತೆ ಬನ್ನಿಮಂಟಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಪೊಲೀಸ್ ಇಲಾಖೆಯಿಂದ ಆಕರ್ಷಕ ಪಥ ಸಂಚಲನ ಹಾಗೂ ಧ್ವಜ ವಂದನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ದ ಡಾ.ಬಿ.ಎಸ್.ಮಂಜುನಾಥ್‌ಸ್ವಾಮಿ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ವಿವಿಧ ಸಮಿತಿಗಳಾದ ಪೆರೇಡ್ ಮತ್ತು ಸಾಂಸ್ಕೃತಿಕ ಉಪಸಮಿತಿ, ಸಾರಿಗೆ ಉಪಸಮಿತಿ, ಸ್ವಾಗತ ಸಮಿತಿ, ಬಹುಮಾನ ಆಯ್ಕೆ ಸಮಿತಿ, ಸನ್ಮಾನ ಉಪಸಮಿತಿ, ಪ್ರಚಾರ ಸಮಿತಿಗಳನ್ನು ರಚಿಸಲಾಗಿದೆ ಈ ಬಾರಿಯೂ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮುಡಾ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು