Categories: ಮೈಸೂರು

ಮೈಸೂರಿನಲ್ಲಿ ಮೂರು ದಿನಗಳ ಮಾವು ಮೇಳಕ್ಕೆ ಸಿದ್ಧತೆ

ಮೈಸೂರು: ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಮೇ 26ರಿಂದ 28ರವರೆಗೆ ಮಾವು ಮತ್ತು ಹಲಸು ಮೇಳ ಆಯೋಜಿಸಲಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

3 ದಿನಗಳ ಕಾಲ ನಡೆಯಲಿರುವ ಮೇಳದಲ್ಲಿ ವಿವಿಧ ಸ್ವಾದದ ಮಾವು, ಹಲಸು ಮೈಸೂರಿಗರಿಗೆ ಲಭ್ಯವಾಗಲಿದೆ. ಮಾವಿನ ಹಣ್ಣು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಹಲಸಿನ ಘಮಲು ಕೂಡ ಸೂಸತೊಡಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಈ ಹಣ್ಣುಗಳ ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ತೋಟಗಾರಿಕೆ ಇಲಾಖೆ ಅನೇಕ ವರ್ಷಗಳಿಂದ ಮಾವು ಮತ್ತು ಹಲಸು ಮೇಳ ಏರ್ಪಡಿಸುತ್ತಿದೆ.

ಮೇ 26ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಕೆ.ಹರೀಶ್ ಗೌಡ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಮೇಳದಲ್ಲಿ ಸಾರ್ವಜನಿಕರು ಭಾಗಿಯಾಗಬಹುದಾಗಿದೆ.

ಮೇಳ ಆಯೋಜನೆಗೆ ತೋಟಗಾರಿಕೆ ಇಲಾಖೆ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಸಂಬಂಧ ಈಗಾಗಲೇ ಎರಡು ಬಾರಿ ರೈತರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ. ಕುಪ್ಪಣ್ಣ ಪಾರ್ಕ್ ಒಂದು ಭಾಗದಲ್ಲಿ 20ಮಳಿಗೆಗಳನ್ನು ನಿರ್ಮಿಸಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮಾವು ಬೆಳೆಗಾರರು, ವರ್ತಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಗೆ ಮಾವು ಮಾಗಿಸುವ ಸಂಬಂಧ ತರಬೇತಿ ಕಾರ್ಯಕ್ರಮ ನಡೆಸಲಾಗಿದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಅಂತಿಮವಾಗಿ 3 ದಿನಗಳ ಕಾಲ ಮೇಳ ನಡೆಸಲು ನಿರ್ಧರಿಸಲಾಗಿದೆ. ಮಾವು ಪ್ರಿಯರ ಆರೋಗ್ಯದ ಹಿತದೃಷ್ಟಿಯಿಂದ ಕ್ಯಾಲ್ಸಿಯಂ ಕಾರ್ಬೈಡ್ ಮುಕ್ತ ನೈಸರ್ಗಿಕವಾಗಿ ಮಾಗಿಸಿದ ಉತ್ಕೃಷ್ಟ ದರ್ಜೆಯ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯುವಂತೆ ನೋಡಿಕೊಳ್ಳಲು, ಉತ್ತಮ ಬೆಲೆ ನಿಗದಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿವಿಧ ಮಾವು, ಹಲಸಿನ ತಳಿಗಳನ್ನು ಮೇಳದಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ. ಮೇಳದಲ್ಲಿ ಮಾನಕೂರ, ಆಮ್ಲೆಟ್, ಚೈತ್ರಪೈರಿ, ಸೇಲಂ, ಶಿರಸಿ ಲೋಕಲ್, ರತ್ನಗಿರಿ(ಆಲ್ಫನ್ಸ್), ಬಾದಾಮಿ, ರಸಪುರಿ, ಮಲಗೋವ, ಮಲ್ಲಿಕಾ, ಸೇಂದೂರಾ, ತೋತಾಪುರಿ, ಬಾಗನಪಲ್ಲಿ, ದಶೇರಿ, ಕಾಲಾಪ ಹಾಡ್, ಕೇಶರ್, ಸಕ್ಕರೆ ಗುತ್ತಿ, ಅಮ್ರಪಾಲಿ, ದಿಲ್‌ಪಸಂದ್ ಸೇರಿ ಹಲವು ತಳಿಯ ಹಣ್ಣುಗಳು ಮೇಳದಲ್ಲಿರಲಿವೆ. ಒಂದೊಂದು ಜಾತಿಯ ಮಾವಿಗೂ ಒಂದೊಂದು ಬೆಲೆ ನಿಗದಿ ಮಾಡಲಾಗುತ್ತದೆ. ತೋಟಗಾರಿಕೆ ಇಲಾಖೆಯೂ ಉದ್ಘಾಟನೆ ದಿನವೇ ದರ ನಿಗದಿಪಡಿಸಲಿದೆ.

Sneha Gowda

Recent Posts

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಬಸ್​ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರದಲ್ಲಿ ನಡೆದಿದೆ.

5 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: 40 ಜಿಬಿಯ ಪೆನ್ ಡ್ರೈವ್‍ ವಶಕ್ಕೆ ಪಡೆದ ವಿಶೇಷ ತನಿಖಾ ತಂಡ

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು…

28 mins ago

ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ : ನರೇಂದ್ರ ಮೋದಿ

ಲೋಕಸಭೆ ಚುನಾವಣೆಯ ಬಿಸಿ ಮತ್ತಷ್ಟು ಹೆಚ್ಚಾಗುತ್ತಿದ್ದು, ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಮತ್ತಷ್ಟು ತಾರಕಕ್ಕೇರುತ್ತಿದೆ. ನಾವು ಅಧಿಕಾರಕ್ಕೆ ಬಂದರೆ…

48 mins ago

ಜಮ್ಮು ಕಾಶ್ಮೀರದಲ್ಲಿ ಧಾರಕಾರ ಮಳೆ: ಭೂಕುಸಿತ, ಹಲವು ಮನೆ ಹಾನಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಮಳೆಯಿಂದ ಭೂಕುಸಿತ…

1 hour ago

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

1 hour ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

2 hours ago